ಮುಂದಿನ 15 ದಿನಗಳೊಳಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ: ಖರ್ಗೆ

ಹೆಚ್ಚು ವಿಳಂಬ ಮಾಡದೇ ಮುಂದಿನ 15 ದಿನಗಳಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಅಧ್ಯಕ್ಷರನ್ನವು ನೇಮಿಸಲಾಗುವುದು ಎಂದು ಲೋಕಸಭಾ ಸದಸ್ಯ ,..
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on: 
ಬೆಂಗಳೂರು: ಹೆಚ್ಚು ವಿಳಂಬ ಮಾಡದೇ ಮುಂದಿನ 15 ದಿನಗಳಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಅಧ್ಯಕ್ಷರನ್ನವು ನೇಮಿಸಲಾಗುವುದು ಎಂದು ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ಗುರುವಾರ ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ಚರ್ಚೆ ನಡೆಸಿದರು. ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಕೆ ಕುರಿತು ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಖರ್ಗೆ ತಿಳಿಸಿದ್ದಾರೆ.
ಇಂಧನ ಸಚಿವ ಡಿ.ಕೆ ಶಿವಕುಮಾರ್ ಪರ ಬೆಂಗಳೂರಿನ ಕಾಂಗ್ರೆಸ್ ಕಾರ್ಪೊರೇಟರ್`ಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಮೇಯರ್ ಪದ್ಮಾವತಿ ನೇತೃತ್ವದಲ್ಲಿ  30 ಕಾರ್ಪೋರೇಟರ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗ, ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಿ. ವೇಣುಗೋಪಾಲ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೇ ಕೆಪಿಸಿಸಿ ಅಧ್ಯಕ್ಷಗಾದಿ ನೀಡಬೇಕೆಂದು ಕಾರ್ಪೊರೇಟರ್`ಗಳು ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಮೇ- 8ರಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಸಂಬಂಧ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುಗು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com