ಕೆಪಿಸಿಸಿ ಹುದ್ದೆಗೆ ಮುಂದುವರಿದ ಲಾಬಿ: ಇಂದು ಬೆಂಗಳೂರಿಗೆ ವೇಣುಗೋಪಾಲ್ ಆಗಮನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ಹಾಗೂ 2018ರ ವಿಧಾನಸಭೆ ಚುನಾವಣೆ ತಂತ್ರಗಾರಿಕೆ ಸಂಬಂಧ ಸಮಾಲೋಚಿಸಲು ಎಐಸಿಸಿ ಪ್ರಧಾನ ...
ವೇಣುಗೋಪಾಲ್
ವೇಣುಗೋಪಾಲ್
Updated on: 
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ಹಾಗೂ 2018ರ ವಿಧಾನಸಭೆ ಚುನಾವಣೆ ತಂತ್ರಗಾರಿಕೆ ಸಂಬಂಧ ಸಮಾಲೋಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾಥ್, ಮಾಣಿಕ್ ಥಾಕೂರ್,  ಮಧು ಗೌಡ ಯಷ್ಕಿ, ಮತ್ತು ಸೇಕ್ ಶೈಲಜಾ ನಾಥ್ ಅವರುಗಳ ಜೊತೆ ವೋಣುಗೋಪಾಲ್ ರಾಜ್ಯದಲ್ಲಿ ಮೂರು ದಿನಗಳ ಕಾಲ ತಂಗಲಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ, ಹಾಗೂ ಪಕ್ಷ ಮತ್ತು ಸರ್ಕಾರಗಳ ನಡುವಿನ ಸಮನ್ವಯ ಹೆಚ್ಚಿಸುವ ಸಂಬಂಧ ಚರ್ಚಿಸಲಿದ್ದಾರೆ.
ಮೇ-8 ರಂದು ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಮೇ 9 ರಂದು ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಜೊತೆ ಸಭೆ, ಹಾಗೂ ಸಮನ್ವಯ ಸಮಿತಿ ಸಭೆ ಹಾಗೂ ಮೇ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಲಿದ್ದಾರೆ.
ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಿದ ನಂತರ ವರದಿಯನ್ನು ಹೈಕಮಾಂಡ್ ಗೆ ಸಲ್ಲಿಸಲಿದ್ದಾರೆ. ನಂತರ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಸದ್ಯ ಅಧ್ಯಕ್ಷರಾಗಿರುವ ಪರಮೇಶ್ವರ್ ಸೇರಿದಂತೆ ಇಂಧನ ಸಚಿವ ಡಿ.ಕೆ ಶಿವಕುಮಾರ್, ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಮಾಜಿ ಸಚಿವ ಎಸ್ ಆರ್ ಪಾಟೀಲ್, ಹಾಗೂ ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com