ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರದ ...
ಜನ ನಮನ ಮತ್ತು ಜನ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
ಜನ ನಮನ ಮತ್ತು ಜನ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
Updated on: 
ಚಿತ್ರದುರ್ಗ: 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಜನಕಲ್ಯಾಣ ಕೆಲಸಗಳು ಮತ್ತೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಡೆದ  ಜನ ಮನನ, ಜನನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆ ನೀಡಿದ್ದೆವು. ಅದರಲ್ಲಿ 155 ಭರವಸೆಗಳನ್ನು ಈಡೇರಿಸಿದ್ದೇವೆ, ಅನ್ನಭಾಗ್. ರೈತರ ಸಾಲಮನ್ನಾ, ಕ್ಷೀರ ಭಾಗ್ಯ, ವಿದ್ಯಾಸಿರಿ, ಕೃಷಿ ಭಾಗ್ಯ ಸೇರಿದಂತೆ ಹಲವು ಉಪಯುಕ್ತ ಯೋಜನೆಗಳು ಜವರನ್ನು ತಲುಪಿವೆ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಿದ್ದೇವೆ, 2013 ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲಿ ಮುಳುಗಿತ್ತು, ಹೀಗಾಗಿ ಬಿಜೆಪಿ ನಾಯಕರು ಹಲವು ಕೇಸುಗಳಲ್ಲಿ ಜೈಲು ಸೇರಿದ್ದರು. ಕೆಲವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ,
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಕುರಿತು ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ಗೆ ಜನರೇ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆ, ನಾವು ಅಭಿವೃದ್ಧಿ ಮುಂದಿಟ್ಟುಕೊಂಡೇ ಆತ್ಮ ವಿಶ್ವಾಸದಿಂದ ಎದುರಿಸುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com