ಈಶ್ವರಪ್ಪ ಜೊತೆಗಿನ ಭಿನ್ನಮತಕ್ಕೆ ತೆರೆ ಎಳೆಯಲು ಯಡಿಯೂರಪ್ಪ ನಿರ್ಧಾರ

ಹಲವು ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ಇಬ್ಬರು ಪ್ರಮುಖ ನಾಯಕರ ನಡುವೆ ಹೊಗೆಯಾಡುತ್ತಿದ್ದ ಭಿನ್ನಮತಕ್ಕೆ ತೆರೆ ಎಳೆಯುವಂತೆ ವರಿಷ್ಠರು ಸೂಚಿಸಿದ ..
ಯಡಿಯೂರಪ್ಪ
ಯಡಿಯೂರಪ್ಪ
Updated on: 
ಬೆಂಗಳೂರು: ಹಲವು ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ಇಬ್ಬರು ಪ್ರಮುಖ ನಾಯಕರ ನಡುವೆ ಹೊಗೆಯಾಡುತ್ತಿದ್ದ ಭಿನ್ನಮತಕ್ಕೆ ತೆರೆ ಎಳೆಯುವಂತೆ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಒಂದಾಗಿ ಮುಂದಿನ ಚನಾವಣೆ ಎದುರಿಸಲು ಸಿದ್ಧವಾಗಿದ್ದಾರೆ ಎನ್ನಲಾಗಿದೆ.
ಮುನಿಸಿಕೊಂಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಅವರ ಜೊತೆ ಸೇರಿ ಮುಂದಿನ ಹೋರಾಟ ನಡೆಸಲು ಸಿದ್ಧವಿರುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಮೇ 18 ರಿಂದ ತಾವು ಹಮ್ಮಿಕೊಂಡಿರುವ ಜನಸಂಪರ್ಕ ಅಭಿಯಾನಕ್ಕೆ ಈಶ್ವರಪ್ಪ ಅವರನ್ನು ವಯಕ್ತಿಕವಾಗಿ ಆಹ್ವಾನಿಸುವುದಾಗಿ ಹೇಳಿದ್ದಾರೆ.
ಜನಸಂಪರ್ಕ ಅಭಿಯಾನ 36 ದಿನಗಳ ಕಾಲ ನಡೆಯಲಿದೆ. ಈ ಬೃಹತ್ ಸಾರ್ವಜನಿಕ ಸಭೆಯಲ್ಲಿ ಈಶ್ವರಪ್ಪ ಪಾಲ್ಗೊಳ್ಳಬೇಕು ಎಂಬುದು ನನ್ನ ಬಯಕೆ, ಕೊನೆ ಪಕ್ಷ ಕೆಲವು ಜಿಲ್ಲೆಗಳ ಕಾರ್ಯಕ್ರಮದಲ್ಲಾದರೂ ಅವರು ಭಾಗವಹಿಸಬೇಕು. ನಮ್ಮ ನಡುವೆ ಯಾವುದೇ ಭಿನ್ನಭಿಪ್ರಾಯಗಳಿಲ್ಲ ಎಂಬ ಸಂದೇಶವನ್ನು ನಾನು ರವಾನಿಸಲು ಬಯಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ  ಪ್ರವಾಸ ಹಮ್ಮಿಕೊಂಡಿರುವ ಯಡಿಯೂರಪ್ಪ ರಾಜ್ಯದ ಪ್ರತಿ ಮೂಲೆಗೆ ತಲುಪಿ ಜನರ ವಿಶ್ವಾಸ ಗಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com