ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಉಂಟಾದ ಸೋಲಿನ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೇ 18 ರಿಂದ ತುಮಕೂರಿನಿಂಜ ಜನ ಸಂಪರ್ಕ ಅಭಿಯಾನ ಆರಂಭಿಸಲಿದ್ದಾರೆ.
36 ದಿನಗಳ ಕಾಲ ಬಿಜೆಪಿ ಮುಖಂಡರು ರಾಜ್ಯದ ಎಲ್ಲಾ ವಿಧಾನ ಸಭೆ ಕ್ಷೇತ್ರಗಳಿಗೂ ಭೇಟಿ ನೀಡಿ ಬರದ ವಸ್ತು ಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ಬರ ಪ್ರವಾಸದ ಬಗ್ಗೆ ವಿವರ ನೀಡಿದರು.
ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕರುಗಳಾದ ಜಗದೀಶ್‌ಶೆಟ್ಟರ್, ಈಶ್ವರಪ್ಪ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪನವರು ಹೇಳಿದರು.
ತುಮಕೂರಿನಿಂದ ಆರಂಭವಾಗಲಿರುವ ಬರ ಪ್ರವಾಸ ಕಾರ್ಯಕ್ರಮದ ಮೊದಲ ಹಂತ ಇದೇ 29 ರಂದು ಬಿಜಾಪುರದಲ್ಲಿ ಮುಕ್ತಾಯಗೊಳ್ಳಲಿದ್ದು, ಒಟ್ಟು 36 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಬರ ಪರಿಹಾರವ ಕಾಮಗಾರಿಗಳ ವೀಕ್ಷಣೆ, ವಸ್ತು ಸ್ಥಿತಿಯ ಬಗ್ಗೆ ಅವಲೋಕಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.