ಜಂತಕಲ್ ಮೈನಿಂಗ್ ಕೇಸ್: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ- ಎಚ್ ಡಿಕೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಮಾಜಿ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ. 
ಬೆಂಗಳೂರು ಪ್ರೆಸ್‌ ಕ್ಲಬ್‌ ಮತ್ತು  ವರದಿಗಾರರ ಕೂಟ ಭಾನುವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಮುಗಿಸಲು ಸಿದ್ದರಾಮಯ್ಯ ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ.
ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಆದರೆ, ಚುನಾವಣೆಗೆ ಮೊದಲೇ  ನನ್ನ  ವರ್ಚಸ್ಸು ಹಾಳು ಮಾಡಲು ಜಂತಕಲ್‌ ಗಣಿಗಾರಿಕೆ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ಆಪಾದಿಸಿದರು.
ಬಿಜೆಪಿಯದು ಒಡೆದ ಮನಸ್ಸು. ಇವರು ಒಟ್ಟಿಗೆ ಹೋದರೆ ಜನ ನಂಬುವುದಿಲ್ಲ. ಮಿಷನ್‌ 150’ ರ ಮಾತು ಹಾಗಿರಲಿ, ಇವರು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಕುಮಾರ ಸ್ವಾಮಿ ಹೇಳಿದರು.
ಲೋಕಾಯುಕ್ತದ ಕತ್ತು ಹಿಸುಕಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ತಮ್ಮ ಕೈಗೊಂಬೆಯಾಗಿಸಿಕೊಂಡಿದ್ದಾರೆ. ಎಸಿಬಿ ಸ್ವತಂತ್ರವಾಗಿ ಕೆಲಸ ಮಾಡಲು ಎಸಿಬಿಗೆ ಸರ್ಕಾರ ಅಧಿಕಾರ ನೀಡಿದೆಯೇ ಎಂದು ಪ್ರಶ್ನಿಸಿದರು.
11 ವರ್ಷದ ನಂತರ ಜಂತಕಲ್ ಮೈನಿಂಗ್ ಹಗರಣದ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧವಿದ್ದೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com