ಕೆ.ಸಿ.ವೇಣುಗೋಪಾಲ್
ರಾಜಕೀಯ
ಮೇ 31ರೊಳಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿರ್ಧಾರ: ವೇಣುಗೋಪಾಲ್
ಕರ್ನಾಕಟ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ಅಂತಿಮ ನಿರ್ಧಾರ...
ಬೆಂಗಳೂರು: ಕರ್ನಾಕಟ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಎಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವೇಣುಗೋಪಾಲ್ ಅವರು, ಇದೇ ತಿಂಗಳ ಅಂತ್ಯದೊಳೆಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಹೀಗಾಗಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆ ಬರಲ್ಲ. ಆದರೆ ಮುಂದಿನ ವಿಧಾನಸಭೆ ಚುನಾವಣೆಯನ್ನು ಯಾರ ನೇತೃತ್ವದಲ್ಲಿ ಎದುರಿಸಬೇಕು ಎಂಬುದನ್ನು ಶೀಘ್ರದಲ್ಲೇ ತೀರ್ಮಾನಿಸಲಾಗುವುದು ಎಂದರು.
ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರಸ ಅವರನ್ನೇ ಮುಂದುವರೆಸುವ ಸಾಧ್ಯತೆ ಇದ್ದು, ಈ ಸಂಬಂಧ ಮೇ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ತೆರಳಿ, ಹೈಕಮಾಂಡ್ ನೊಂದಿಗೆ ಚರ್ಚಿಸಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ