ರಾಜಕೀಯ

ಅದು ಪರಿವರ್ತನೆಯಲ್ಲ, ಪಶ್ಚಾತ್ತಾಪ ಯಾತ್ರೆ: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಅದು ಪರಿವರ್ತನೆಯಲ್ಲ, ಪಶ್ಚಾತ್ತಾಪ ಯಾತ್ರೆ: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ
ಸಿದ್ದರಾಮಯ್ಯ
Published On :
ಬೆಂಗಳೂರು: ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸದಲ್ಲಿ ಇಂದಿನಿಂದಲೇ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅದು ಪರಿವರ್ತನೆಯಲ್ಲ, ಪಶ್ಚಾತ್ತಾಪ ಯಾತ್ರೆ ಎಂದು ಟೀಕಿಸಿದ್ದಾರೆ.
ಇಂದು ಬೆಳಗ್ಗೆ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾತ್ರೆಯುದ್ದಕ್ಕೂ ಬಿಜೆಪಿ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
ಯಾತ್ರೆಯಲ್ಲಿ ಯಾರು ಭಾಗವಹಿಸುತ್ತಿದ್ದಾರೆ? ಯಡಿಯೂರಪ್ಪ ಮತ್ತು ಮಿಸ್ಟರ್ ಅಮಿತ್ ಶಾ?.... ಅವರಿಬ್ಬರೂ ಜೈಲಿಗೆ ಹೋಗಿ ಬಂದವರು. ಅವರಿಂದ ಏನು ಬದಲಾವಣೆ ನಿರೀಕ್ಷಿಸಲು ಸಾಧ್ಯ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ಬಿಜೆಪಿ ಕೋಮು ಸಾಮರಸ್ಯವನ್ನು ಹಾಳು ಮಾಡುವ ಮೂಲಕ ಸಮಾಜವನ್ನು ಹೊಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ರಾಜ್ಯದ ಜನತೆ ಈಗಾಗಲೇ ಕಾಂಗ್ರೆಸ್ ಗೆ ಮತ ನೀಡಿ ಮತ್ತೆ ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರವನ್ನು ಜನ ಇನ್ನೂ ಮರೆತಿಲ್ಲ. ಕರ್ನಾಟಕದ ಜನತೆ ರಾಜಕೀಯವಾಗಿ ತುಂಬಾ ಪ್ರಬುದ್ಧವಾಗಿದ್ದಾರೆ. ಉತ್ತರ ಪ್ರದೇಶ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳ ಜನರ ರೀತಿ ಕನ್ನಡಿಗರಲ್ಲ. ಬಿಜೆಪಿ ಹಿಂದೂತ್ವದ ಮೂಲಕ ಮತಗಳ ಧ್ರುವೀಕರಣ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.