ಸರ್ಕಾರದ ಕಾರ್ಯಕ್ರಮಗಳನ್ನು ಅವಧಿಯೊಳಗೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ

ಜಾರಿಯಲ್ಲಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಪ್ರಸಕ್ತ ಸಾಲಿನ ಹಣಕಾಸು ವರ್ಷ ....
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬೆಂಗಳೂರು: ಜಾರಿಯಲ್ಲಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಪ್ರಸಕ್ತ ಸಾಲಿನ ಹಣಕಾಸು ವರ್ಷ ಮುಗಿಯುವುದರೊಳಗೆ ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದು ಚುನಾವಣೆಯ ವರ್ಷ. ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಬಹುದು. ಜೊತೆಗೆ ಪ್ರಸಕ್ತ ಸಾಲಿನ ಹಣಕಾಸು ವರ್ಷ ಪೂರ್ಣಗೊಳ್ಳಲು ಇನ್ನು 5 ತಿಂಗಳು ಬಾಕಿಯಿದೆ. ಆದ್ದರಿಂದ ಎಲ್ಲ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 
ಸರ್ಕಾರಿ ಭೂಮಿ ಒತ್ತುವರಿ ತೆರವು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮನೆ ಮತ್ತು ನಿವೇಶನಗಳ ಹಂಚಿಕೆ, ಇಂದಿರಾ ಕ್ಯಾಂಟೀನ್, ಪಡಿತರ ಚೀಟಿ ಹಂಚಿಕೆ, ಭೂ ಮಂಜೂರಾತಿ ಹಾಗೂ ಹಕ್ಕುಪತ್ರಗಳ ವಿತರಣೆ ಕಡೆ ಹೆಚ್ಚಿನ ಗಮನ ನೀಡುವಂತೆ ಸಿಎಂ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com