ಐಟಿ ಇಲಾಖೆ ಸ್ಪಷ್ಟನೆಯಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗ: ಬಿಜೆಪಿ ಶಾಸಕ ಸುರೇಶ್ ಕುಮಾರ್

ಆದಾಯ ತೆರಿಗೆ ಇಲಾಕೆ ಸ್ಪಷ್ಟನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರಿಗೆ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...
ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್
ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್
ಬೆಂಗಳೂರು: ಆದಾಯ ತೆರಿಗೆ ಇಲಾಕೆ ಸ್ಪಷ್ಟನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರಿಗೆ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ ಶಾಸಕ ಮತ್ತು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದ ಅತ್ಯಂತ ಪಾರದರ್ಶಕ ಸರ್ಕಾರ ಎಂದು ಪದೇ ಪದೇ ಹೇಳುತ್ತಲೇ ಬಂದಿದ್ದರು. ಅವರ ಸರ್ಕಾರ ಎಷ್ಟು ಪಾರದರ್ಶಕ ಎನ್ನುವುದನ್ನು ಆದಾಯ ತೆರಿಗೆ ಇಲಾಖೆಯೇ ಖಚಿತಪಡಿಸಿದೆ. ರಾಜ ಬೆತ್ತಲಾಗಿದ್ದಾನೆ ಎನ್ನುವ ನಾಣ್ನುಡಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣವಾಗಿ ಅನ್ವಯಿಸುತ್ತದೆ. ಜನರ ಮುಂದೆ ಸಿದ್ದರಾಮಯ್ಯ ಅವರು ಸಂಪೂರ್ಣ ಬೆತ್ತಲಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 
ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯಲು ಆದಾಯ ತೆರಿಗೆ ಇಲಾಖೆ ಮೂಲಕ ಬಿಜೆಪಿ ಒತ್ತಡ ಹೇರಿತ್ತ ಎಂದು ಸಿದ್ದರಾಮಯ್ಯ ಅವರ ಆರೋಪ ಮಾಡಿದ್ದರು. ಆದರೆ, ಅದು ಸಂಪೂರ್ಣ ಆಧಾರರಹಿತ ಹಾಗೂ ಸುಳ್ಳು ಎಂದು ಸ್ವತಃ ಆದಾಯ ತೆರಿಗೆ ಇಲಾಖೆಯೇ ಸ್ಪಷ್ಟಪಡಿಸಿದೆ. 
ಉಡಾಫೆ ಮತ್ತು ಇತರರನ್ನು ಕೀಳಾಗಿ ಬಿಂಬಿಸುವ ಮುಖ್ಯಮಂತ್ರಿಗಳ ಬಂಡವಾಳ ಇದೀಗ ಬಟಾಬಯಲಾಗಿದೆ. ಮುಖ್ಯಮಂತ್ರಿಗಳು ಸದಾ ಅಪ್ರಸ್ತುತ ವಿಷಯಗಳ ಮೇಲೆಯೇ ಅವಲಂಬಿತರಾಗಿದ್ದಾರೆ. ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಸಿಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ದಾಳಿಯಿಂದ ತಪ್ಪಿಸಿಕೊಳ್ಳಬೇಕಿದ್ದರೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಿ ಎಂದು ಹೇಳಿದ್ದರು ಎಂದಿದ್ದರು. 
ಈ ಆರೋಪವನ್ನು ತಳ್ಳಿ ಹಾಕಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು, ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ಸಚಿವರಿಗೆ ಯಾವುದೇ ರೀತಿಯ ಒತ್ತಡವನ್ನು ಹೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಆಧಾರ ರಹಿತವಾದದ್ದು ಎಂದು ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com