ರಾಜಕೀಯ

ಕರ್ನಾಟಕ ವಿಧಾನಪರಿಷತ್ ಆರು ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ....

ಕರ್ನಾಟಕ ವಿಧಾನಪರಿಷತ್ ಆರು ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ನಿನ್ನೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ನಿನ್ನೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಿತು.
ನೈರುತ್ಯ ಪದವೀಧರರ ಕ್ಷೇತ್ರದಿಂದ ಆಯನೂರು ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಗಣೇಶ್ ಕಾರ್ಣಿಕ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿ.ನಿರಂಜನ್ ಮೂರ್ತಿ, ಈಶಾನ್ಯ ಪದವೀಧರರ ಕ್ಷೇತ್ರದಿಂದ ಕೆ.ಬಿ.ಶ್ರೀನಿವಾಸ್ ಅವರನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಆಯ್ಕೆ ಮಾಡಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಹಾಲನೂರು ಎಸ್.ಲೇಪಾಕ್ಷಿ ಮತ್ತು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಎ.ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಂತೆ ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಅಭ್ಯರ್ಥಿಗಳನ್ನು ನಿನ್ನೆ ಆಯ್ಕೆ ಮಾಡಲಾಯಿತು.
ಕರ್ನಾಟಕ ವಿಧಾನಪರಿಷತ್ತಿನ ಎಲ್ಲಾ ಆರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗಿದ್ದು ಇದು ವೆಬ್ ಸೈಟ್ ನಲ್ಲಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಬಿಜೆಪಿ ಚುನಾವಣಾ ಸಮಿತಿಯ ಇತರ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.