ಮಂಗಳೂರು: ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿಸುದ್ದಿಯನ್ನು ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಹಬ್ಬಿಸುತ್ತಿದ್ದಾರೆ. ತಾವು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂಬ ವಿಷಯವನ್ನು ಮಧ್ವರಾಜ್ ಅವರೇ ಹಲವು ಬಾರಿ ಹೇಳಿದ್ದಾರೆ ಎಂದರು.
ಈ ಸಂಬಂಧ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ನಿನ್ನೆ ಮಂಗಳೂರಿನಲ್ಲಿ ಉತ್ತರಿಸಿದರು.