ಬೆಂಗಳೂರು:ಕನ್ನಡದ ಖ್ಯಾತ ನಟ ಉಪೇಂದ್ರ ತಮ್ಮದೇ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂದು ಪಕ್ಷ ಸ್ಥಾಪನೆ ಮಾಡಿದ ನಂತರ ಇದೀಗ ಕನ್ನಡದ ಮತ್ತೊಬ್ಬ ಖ್ಯಾತ ನಟ ರಂಗಾಯಣ ರಘು ನಿನ್ನೆ ಜಾತ್ಯತೀತ ಜನತಾ ದಳ ಪಕ್ಷವನ್ನು ಸೇರಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದನಿದ್ದೇನೆ ಎಂದು ಕೂಡ ಹೇಳಿದ್ದಾರೆ.
ಜೆಡಿಎಸ್ ನಾಯಕರಾದ ಹೆಚ್.ಡಿ.ದೇವೇಗೌಡ ಮತ್ತು ಹೆಚ್ .ಡಿ.ಕುಮಾರಸ್ವಾಮಿ ಅವರು ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ.ಅನೇಕ ವರ್ಷಗಳಿಂದ ನಮ್ಮ ಕುಟುಂಬ ಸದಸ್ಯರು ಜೆಡಿಎಸ್ ನ ನಿಷ್ಟಾವಂತರು. ನಾನು ಕೂಡ ಸಮಾಜದ ಒಳ್ಳೆಯದಕ್ಕೆ ಸೇವೆ ಸಲ್ಲಿಸಬೇಕು ಎಂಬ ಅಂದುಕೊಂಡಿದ್ದೇನೆ ಎಂದರು.
ತುಮಕೂರಿನ ಮಧುಗಿರಿ ಮತ್ತು ಪಾವಗಡ ಕ್ಷೇತ್ರದ ಜನತೆ ನನ್ನನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಪ್ರದೇಶದ ಜನರ ಸೇವೆ ಮಾಡಲು ನಾನು ಬದ್ಧನಾಗಿದ್ದೇನೆ. ಆದರೆ ಎಲ್ಲಿಂದ ಸ್ಪರ್ಧಿಸಬೇಕೆಂಬುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಹೇಳಿದರು.