ಈ ಹಿಂದಿನಿಂದಲೂ ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಾ ಬರುತ್ತಿದ್ದರಾದರೂ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದರು. ಇದೀಗ ಅವರಿಗೆ ಮೊದಲ ಬಾರಿಗೆ ಪಕ್ಷದ ಪದಾಧಿಕಾರಿ ಸ್ಥಾನ ನೀಡಲಾಗಿದ್ದು, ಈ ಮೂಲಕ ಅಧಿಕೃತವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.