ಯೋಗೇಶ್ ಗೌಡ ಹತ್ಯೆ ಪ್ರಕರಣ: ಇಬ್ಬರು ಸಚಿವರ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಒತ್ತಾಯ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...
ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ
ಬೆಂಗಳೂರು; ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ನ್ಯಾಯಯುತ ತನಿಖೆ ನಡೆಯಬೇಕೆಂದರೆ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಹೇಳಿದ್ದಾರೆ. 
ಕಲುಕರ್ಣಿ ಹಾಗೂ ಜಾರ್ಜ್ ಅವರು ಅಧಿಕಾರದಲ್ಲಿದ್ದು, ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧದ ಸಾಕ್ಷ್ಯಾಧಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇಬ್ಬರೂ ಸಚಿವರು ಅಧಿಕಾರದಲ್ಲಿರುವವರೆಗೂ ನ್ಯಾಯಯುತ ತನಿಖೆ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ತಮ್ಮ ರಾಜಕೀಯ ತಂತ್ರಗಳಿಗೆ ಬಳಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. 
ಅಲ್ಲದೆ, ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com