ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒವೈಸಿಯ ಎಐಎಂಎಂ ಸ್ಪರ್ಧೆ!

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಎಂ) ಪಕ್ಷ ಕೂಡ ಕಣಕ್ಕಿಳಿಯಲಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಎಂ) ಪಕ್ಷ ಕೂಡ ಕಣಕ್ಕಿಳಿಯಲಿದೆ ಎಂದು  ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮಾಹಿತಿ ನೀಡಿದ್ದು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು.  ಇದಕ್ಕೂ ಮೊದಲು ಹೈದರಾಬಾದ್ ನ ದುರುಸ್ಸಲಾಂನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಒವೈಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು  ಬಹಿರಂಗಪಡಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಅಂತಹ ವ್ಯತ್ಯಾಸವೇನೂ ಇಲ್ಲ.. ಈ ಎರಡೂ ಪಕ್ಷಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ..ಕಾಂಗ್ರೆಸ್ ಪಕ್ಷ ಅಭಿವ್ಯಕ್ತಿ  ಸ್ವಾತಂತ್ರ್ಯದ ಬಗ್ಗೆ ಮಾತಾಡುತ್ತದೆ. ಆದರೆ ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲೇ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ. ಕರ್ನಾಕದಲ್ಲಿಯೂ ನನ್ನ ಸಾರ್ವಜನಿಕ ಸಭೆಗಳಿಗೆ ಅನುಮತಿ ಇಲ್ಲ ಎಂದು ಒವೈಸಿ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com