ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನವೆಂಬರ್ 1 ರಿಂದ ಮನೆ– ಮನೆಗೆ ಕುಮಾರಣ್ಣ ಕಾರ್ಯಕ್ರಮ ಹಮ್ಮಿ ಕೊಳ್ಳಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ
ಮನೆ– ಮನೆಗೆ ಕುಮಾರಣ್ಣ’ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವಿಸ್ತರಿಸಲು ಜೆಡಿಎಸ್ ನಿರ್ಧರಿಸಿದೆ ಎಂದರು.
ಕಾಂಗ್ರೆಸ್‌ನ ಮನೆ– ಮನೆಗೆ ಕಾಂಗ್ರೆಸ್ ಮತ್ತು ಬಿಜೆಪಿಯ ವಿಸ್ತಾರಕ ಸಭೆಗಳಿಗೆ ಪ್ರತಿಯಾಗಿ ಮನೆ– ಮನೆಗೆ ಕುಮಾರಣ್ಣ ಕಾರ್ಯಕ್ರಮ ವನ್ನು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲೂ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈಗ ಇರುವ 33 ಕ್ಷೇತ್ರಗಳನ್ನು ಉಳಿಸಿಕೊಳ್ಳುವುದರ ಜತೆಗೆ ಉಳಿದ ಕ್ಷೇತ್ರಗಳನ್ನೂ ಗೆಲ್ಲುವ ಪ್ರಯತ್ನ ನಡೆಸಬೇಕಾಗಿದೆ. ಈ ಉದ್ದೇಶಕ್ಕಾಗಿ ಹಲವರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದು ದೇವೇಗೌಡ ತಿಳಿಸಿದರು.
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಡಿಯೊ ಕಾನ್ಫೆರೆನ್ಸಿಂಗ್ ಮೂಲಕ ಮಾತನಾಡಿ, ‘ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.