ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನ: ಆಸಕ್ತಿ ತೋರದ ಶಾಸಕರ ವಿರುದ್ಧ ವೇಣುಗೋಪಾಲ್ ಗರಂ

ಮನೆಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಶಾಸಕರು ಕಾರ್ಯಕರ್ತರ ಜೊತೆ ಸರಿಯಾಗಿ ಪಾಲ್ಗೋಳ್ಳದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್...
ಕೆ.ಸಿ ವೇಣುಗೋಪಾಲ್
ಕೆ.ಸಿ ವೇಣುಗೋಪಾಲ್
ಬೆಂಗಳೂರು: ಮನೆಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಶಾಸಕರು ಕಾರ್ಯಕರ್ತರ ಜೊತೆ ಸರಿಯಾಗಿ ಪಾಲ್ಗೋಳ್ಳದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಈ ಸಂಬಂಧ ಇಂದು ಶಾಸಕರ ಜೊತೆ ವೇಣುಗೋಪಾಲ್ ಸಭೆ ನಡೆಸಿ ಚರ್ಚಿಸಲಿದ್ದಾರೆ.  ಮನೆ ಮನೆ ಕಾಂಗ್ರೆಸ್ ಅಭಿಯಾನದಲ್ಲಿ ಪ್ರತಿ ಮನೆಗೆ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ತೆರಳಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಸೆಪ್ಟಂಬರ್ 23 ರಂದು ಈ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು.
ಆದರೆ ಕಾರ್ಯಕ್ರಮ ಮಾತ್ರ ನಿರೀಕ್ಷಿಸಿದ ಮಟ್ಟಿಗೆ ಯಶಸ್ವಿಯಾಗಿಲ್ಲ,  ಶಾಸಕರು ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಆಸಕ್ತಿ ತೋರದ ಬಗ್ಗೆ ವೇಣುಗೋಪಾಲ್ ಅಸಮಾಧಾನಗೊಂಡಿದ್ದಾರೆ.
ಪಕ್ಷದ ಸಾಮಾಜಿಕ ಜಾಲ ತಾಣದ ಕಾರ್ಯ ವೈಖರಿಗಳ ಬಗ್ಗೆ ಪ್ರಮುಖರ ಜೊತೆ ಗುರುವಾರ ಸಭೆ ನಡೆಸಿದ ಅವರು,  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಮಹತ್ವದ ಸಭೆ ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದಾರೆ, ಪಕ್ಷದ ಎಲ್ಲ ಶಾಸಕರು ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ವೇಣುಗೋಪಾಲ್‌ ಅವರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ದಸರಾ ರಜೆಯ ಹಿನ್ನೆಲೆಯಲ್ಲಿ ಶಾಸಕರು ಅಭಿಯಾನ ಆರಂಭಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ವೇಣುಗೋಪಾಲ್ ಗರಂ ಆಗಿದ್ದಾರೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com