ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿಎಂ ರಾಜಕೀಯ ಜೀವನ ಅಂತ್ಯ: ಜಿಟಿಡಿ

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿಎಂ ರಾಜಕೀಯ ಜೀವನ ಅಂತ್ಯಗೊಳ್ಳಲಿದೆ ಎಂದು ತಿರುಗೇಟು ನೀಡಿದ್ದಾರೆ...
ಜಿ.ಟಿ ದೇವೇಗೌಡ
ಜಿ.ಟಿ ದೇವೇಗೌಡ
ಮೈಸೂರು: ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಬಿಟ್ಟು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಿಂದ ಕೊನೆಯ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಮುಖಂಡ ಜಿ,ಟಿ ದೇವೇಗೌಡ, 2018ರ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸಿಎಂ ರಾಜಕೀಯ ಜೀವನ ಅಂತ್ಯಗೊಳ್ಳಲಿದೆ ಎಂದು ತಿರುಗೇಟು ನೀಡಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರ ತಮ್ಮ ಕರ್ಮಭೂಮಿಯಾಗಿದೆ ಎಂದ ಅವರು ಕಾಂಗ್ರೆಸ್ ಸೇರುವ ವದಂತಿಗಳನ್ನು ತಳ್ಳಿ ಹಾಕಿದರು.
ಚಾಮುಂಡೇಶ್ವರಿ ಜೆಡಿಎಸ್ ಭದ್ರಕೋಟೆ ಎಂದು ಹೇಳಿದ ಅವರು,  ತಮ್ಮ ಪುತ್ರ ಹರೀಶ್  ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಊಹಾಪೋಹ ಎಂದು ಸ್ಪಷ್ಟ ಪಡಿಸಿದರು. ಕಳೆದ ನಾಲ್ಕು ವರ್ಷಗಳಲ್ಲಿ ಒಂದು ಬಾರಿಯೂ ನಾನು ನನ್ನ ವಯಕ್ತಿಕ ಕೆಲಸಗಳಿಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿಲ್ಲ ಎಂದು, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಕುರುಬರ ಪ್ರಬಲ ನಾಯಕ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಯಾವಾಗಲೂ ಎಲ್ಲವೂ ತಮಗೆ ಬೇಕೆಂದು ಹಿಡಿದುಕೊಳ್ಳುವ ವ್ಯಕ್ತಿ ಎಂದು ಆರೋಪಿಸಿದರು. ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಗಳಿಗೆ ಹಣವನ್ನು ಎಲ್ಲಿಂದ ತಂದರು ಎಂದು ಜಿಟಿಡಿ ಪ್ರಶ್ನಿಸಿದ್ದಾರೆ. 
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕರೆತರಲು ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದರು. ಆದರೆ ಅಂಥವರನ್ನೇ ಸಿದ್ದರಾಮಯ್ಯ ನಿರ್ಲಕ್ಷಿಸಿದರು ಎಂದು ದೂರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com