ರಾಜ್ಯ ಕಾಂಗ್ರೆಸ್ ಗೂ ತಟ್ಟಿದ ಕೇರಳ ಸೋಲಾರ್ ಹಗರಣದ ಬಿಸಿ: ವೇಣುಗೋಪಾಲ್ ವಿರುದ್ಧ ಬಿಜೆಪಿ ಕಿಡಿ

ನೆರೆಯ ರಾಜ್ಯ ಕೇರಳದಲ್ಲಿ ನಡೆದಿರುವ ಸೋಲಾರ್ ಹಗರಣದ ಬಿಸಿ ರಾಜ್ಯ ಕಾಂಗ್ರೆಸ್ ಗೂ ತಟ್ಟಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೇರಳ ಸಂಸದ ಕೆ.ಸಿ ...
ಕೆ.ಸಿ ವೇಣುಗೋಪಾಲ್
ಕೆ.ಸಿ ವೇಣುಗೋಪಾಲ್
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ನಡೆದಿರುವ ಸೋಲಾರ್ ಹಗರಣದ ಬಿಸಿ  ರಾಜ್ಯ ಕಾಂಗ್ರೆಸ್ ಗೂ ತಟ್ಟಿದೆ.  ರಾಜ್ಯ ಕಾಂಗ್ರೆಸ್ ಉಸ್ತುವಾರಿ  ಹಾಗೂ ಕೇರಳ ಸಂಸದ ಕೆ.ಸಿ ವೇಣುಗೋಪಾಲ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ
ಕರ್ನಾಟಕ ಬಿಜೆಪಿ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲು ರಾಜ್ಯ ಕಾಂಗ್ರೆಸ್ ಗೆ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಆರೋಪಿಸಿದ್ದಾರೆ, ಕೇರಳ ಸರ್ಕಾರ ಕೆ.ಸಿ ವೇಣು ಗೋಪಾಲ್ ವಿರುದ್ಧ ಎಫ್ ಐ ಆರ್ ದಾಖಲಿಸಲು ನಿರ್ಧರಿಸಿದೆ. ಹೀಗಿರುವಾಗ ಬಿಜೆಪಿ ನಾಯಕರ ಬಗ್ಗೆ ಮಾತನಾಡುವ ಬದ್ಧತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಿಂದ ಕೆ.ಸಿ ವೇಣುಗೋಪಾಲ್ ಅವರನ್ನು ತೆಗೆದು ಹಾಕಬೇಕು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯನ್ನು ವೇಣುಗೋಪಾಲ್ ಅವರಿಗೆ ವಹಿಸಿರುವುದು ಅಚ್ಚರಿ ಮೂಡಿಸಿದೆ, ಏಕೆಂದರೇ ಸ್ವತಃ ವೇಣುಗೋಪಾಲ್ ಅವರೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಿಸಲು ಸಿದ್ದರಾಮಯ್ಯ ಸರ್ಕಾರ ಹಗಲಿರುಳು ಸಿದ್ಧತೆ ನಡೆಸುತ್ತಿದೆ ಎಂದು ದೂರಿದ್ದಾರೆ.
ಕೇರಳ ಸರ್ಕಾರ ವೇಣುಗೋಪಾಲ್ ವಿರುದ್ಧ ಎಫ್ ಐಆರ್ ದಾಖಲಿಸಲು ನಿರ್ಧರಿಸಿದೆ ಹೀಗಾಗಿ ರಾಜ್ಯ ಕಾಂಗ್ರೆಸ್ ವೇಣುಗೋಪಾಲ್ ಅವರ ನೈತಿಕ ಹೊಣೆ ಹೊತ್ತು ಉಸ್ತುವಾರಿಗೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ವಿರುದ್ಧ ಇಂದು ಬಿಜೆಪಿ ಮಹಿಳಾ ಮೋರ್ಚಾ ಗಾಂಧಿ ನಗರದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com