ಚನ್ನಪಟ್ಟಣ: ಶಾಸಕ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ಗುಡ್‌ಬೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್ ನಾನು ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್‌ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್ ಅವರೇ ಕಾರಣ' ಎಂದು ಕಿಡಿ ಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಯೋಗೇಶ್ವರ್ ತಮ್ಮ ಮುಂದಿನ ರಾಜಕೀಯ ಜೀವನದ ಮುಂದಿನ ತೀರ್ಮಾನವನ್ನು ಅಕ್ಟೋಬರ್ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.