ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಬಿಜೆಪಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಮಂಗಳವಾರ ಮತ್ತೊಂದು ದೂರು ದಾಖಲಿಸಿದೆ.
ಮಹಾಲಕ್ಷ್ಮಿ ಲೇಔಟ್ ನಲ್ಲಿ ವಶಪಡಿಸಿಕೊಂಡ ಭೂಮಿಗೆ ಪರ್ಯಾಯವಾಗಿ ಹೆಬ್ಬಾಳದಲ್ಲಿ ಶಾಂತಲಾ ಇಂಡಸ್ಟ್ರೀಯಲ್ ಎಂಟರ್ ಪ್ರೈಸಸ್ ಗೆ ಜಮೀನು ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಿಬಿಎಂಪಿ ಬಿಜೆಪಿ ಮಾಜಿ ಕಾರ್ಪೋರೇಟರ್ ಎನ್. ಆರ್ ರಮೇಶ್ ಮತ್ತು ಎಂಎಲ್ ಸಿ ಬಿಜೆ ಪುಟ್ಟಸ್ವಾಮಿ, ಬಿಡಿಎ ಆಯುಕ್ತ ಶ್ಯಾಮ್ ಭಟ್, ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ. ಯತೀಂದ್ರ ವಿರುದ್ಧ ದೂರು ದಾಖಲಾಗಿದೆ.
ಭೂಪಸಂದ್ರದಲ್ಲಿ 6.26 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದ ನಂತರ ರಮೇಶ್ ದೂರು ದಾಖಲಿಸಿದ್ದಾರೆ.