ಮೂರು ದಿನ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ, ಮೊದಲ ದಿನ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 20ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿರುವ ರಾಹುಲ್, ಮಧ್ಯಾಹ್ನ ಶಿವಮೊಗ್ಗದಲ್ಲಿ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 21ರಂದು ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸುವರು.