ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವುದಕ್ಕಾಗಿ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ "ಈ ಬಾರಿಯೂ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಕಾರ್ಯಕ್ರಮಗಳು ನಡೆಯಲಿವೆ. ಟಿಪ್ಪು ಜಯಂತಿ ಆಚರಣೆಯ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಕಾರ್ಯಕ್ರಮದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ನಡೆಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.