ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಇನ್ನೂ ಆರು ತಿಂಗಳ ಕಾಲ ಅಜಯ್ ಸೇಠ್ ಅವರನ್ನು ವರ್ಗಾವಣೆ ಮಾಡದಂತೆ ಸಿಎಂ ಬಳಿ ತನ್ವೀರ್ ಸೇಠ್ ಮನವಿ ಮಾಡಿದ್ದರು. ಪರೀಕ್ಷೆ ಸಿದ್ಧತೆ ಸಮಯ ಸಮೀಪಿಸುತ್ತಿರುವುದರಿಂದ ಅವರನ್ನು ಮಾತೃ ಇಲಾಖೆಯಲ್ಲಿಯೇ ಉಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪದೇ ಪದೇ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಸಂಬಂಧ ತನ್ವೀರ್ ಸೇಠ್ ಅಧಿಕೃತವಾಗಿ ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ಅಜಯ್ ಸೇಠ್ ಅವರನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಲಾಗಿದೆ.