ಎಫ್ಐಆರ್ ದಾಖಲಿಸಿದಾಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ: ಸಚಿವ ಜಾರ್ಜ್ ಪರ ಎಚ್ ಡಿಕೆ ಬ್ಯಾಟಿಂಗ್

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಸಿಬಿಐ....
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದು, ಅವರು ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ. ಆದರೆ ಜೆಡಿಎಸ್ ಮಾತ್ರ ಸಚಿವ ಜಾರ್ಜ್ ಬೆಂಬಲಕ್ಕೆ ನಿಂತಿದ್ದು, ಎಫ್ಐಆರ್ ದಾಖಲಿಸಿದ ತಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಜೆಪಿನಗರದ ತಮ್ಮ ನಿವಾಸದಲ್ಲಿ ಜಾರ್ಜ್ ರಾಜಿನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಎಫ್ಐಆರ್ ದಾಖಲಿಸಿದಾಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಯಾವುದಾದರು ಸಾಕ್ಷ್ಯ ಸಿಕ್ಕರೆ ರಾಜಿನಾಮೆ ನೀಡಬೇಕು. ಹೀಗಾಗಿ ಸದ್ಯ ನಾನು ಜಾರ್ಜ್ ರಾಜಿನಾಮೆಗೆ ಆಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಿನ್ನೆಯಷ್ಟೇ ಸಚಿವ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಜಾರ್ಜ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಿದೆ.
ಸಿಬಿಐ ಎಫ್ಆಆರ್ ದಾಖಲಿಸುತ್ತಿದ್ದಂತೆ ಮತ್ತೆ ಸಚಿವ ಜಾರ್ಜ್ ವಿರುದ್ಧ ಹೋರಾಟಕ್ಕೆ ಬಿಜೆಪಿ ಅಣಿಯಾಗಿದ್ದು, ಸಚಿವರ ರಾಜಿನಾಮೆಗೆ ಆಗ್ರಹಿಸಿ ವ್ಯವಸ್ಥಿತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com