ನಗರದ ಜೆಪಿ ನಗರದಲ್ಲಿರುವ ಕುಮಾರ ಸ್ವಾಮಿ ಅವರ ನಿವಾಸಕ್ಕೆ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಉಭಯ ನಾಯಕರು ಸುಮಾರು ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ರಾಜಕೀಯದಲ್ಲಿ ಬದ್ಧ ಎದುರಾಳಿಗಳು ಎಂದೇ ಬಿಂಬಿತವಾಗಿರುವ ಡಿ.ಕೆ.ಶಿವಕುಮಾರ್ ಹಾಗೂ ಎಚ್. ಡಿ.ಕುಮಾರಸ್ವಾಮಿ ಭೇಟಿ ರಾಜಕೀಯ ವಲಯದಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿದೆ. ಆದರೆ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಚಿಸಲಾಗಿರುವ ವಿದ್ಯುತ್ ಖರೀದಿ ಹಗರಣ ಸಂಬಂಧ ಸದನ ಸಮಿತಿಯ ವರದಿ ಅಕ್ಟೋಬರ್ 30ರಂದು ಸಲ್ಲಿಸಬೇಕಿದ್ದು, ಆ ಸಮಿತಿ ಸದಸ್ಯರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ಸಹಿ ಪಡೆಯಲು ಶಿವಕುಮಾರ್ ಬಂದಿದ್ದರು ಎಂದು ತಿಳಿದುಬಂದಿದೆ.