ಸಂಪುಟ ವಿಸ್ತರಣೆ ಬೆನ್ನಲ್ಲೇ 'ಕೈ' ನಲ್ಲಿ ಭುಗಿಲೆದ್ದ ಭಿನ್ನಮತ: ಸಿಎಂ ವಿರುದ್ಧ 'ಪರಂ' ಗರಂ

ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮದಿಂದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೂರ ಉಳಿದಿದ್ದು ಕಾಂಗ್ರೆಸ್ ನೊಳಗಿನ ಭಿನ್ನಮತಕ್ಕೆ...
ಸಿದ್ದರಾಮಯ್ಯ ಮತ್ತ ಪರಮೇಶ್ವರ್
ಸಿದ್ದರಾಮಯ್ಯ ಮತ್ತ ಪರಮೇಶ್ವರ್
ಬೆಂಗಳೂರು: ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ಪಕ್ಷದೊಳಗಿನ ಭಿನ್ನಮತ ತಾರಕಕ್ಕೇರಿದೆ. ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮದಿಂದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೂರ ಉಳಿದಿದ್ದು ಕಾಂಗ್ರೆಸ್ ನೊಳಗಿನ ಭಿನ್ನಮತಕ್ಕೆ ಸಾಕ್ಷಿಯಾಗಿದೆ.
ಪರಮೇಶ್ವರ್ ಮತ್ತು ನಮ್ಮ ನಡುವ ಯಾವುದೇ ಅಸಮಾಧಾನವಿಲ್ಲ, ಪ್ರಮಾಣ ವಚನ ನಡೆದ ದಿನ ಪರಮೇಶ್ವರ್ ದೆಹಲಿಯಲ್ಲಿದ್ದ ಕಾರಣ ಸಮಾರಂಭಕ್ಕೆ ಹಾಜರಾಗಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ತಿಪ್ಪೆ ಸಾರಿಸಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮ ನಡೆದ ದಿನ ಪರಮೇಶ್ವರ್ ಸದಾಶಿವನಗರದ ಮನೆಯಲ್ಲಿದ್ದೇ ಇದ್ಜರಲ್ಲ ಎಂದು ಕೇಳಿದ ಪ್ರಶ್ನೆಗೆ ಕಿರಿಕಿರಿಗೊಂಡ ಸಿಎಂ ನೀವು ಹೋಗಿ ಅವರನ್ನೇ ಕೇಳಿ ಎಂದು ಕಿಡಿ ಕಾರಿದರು.
ಇನ್ನೂ ಗೃಹಖಾತೆ ಹೊಣೆಗಾರಿಕೆ ವಹಿಸಿಕೊಂಡ ನಂತರ ಸಚಿವ ರಾಮಲಿಂಗಾರೆಡ್ಡಿ ಸಿಎಂ ಮತ್ತು ಪರಮೇಶ್ವರ್ ಇಬ್ಬರನ್ನು ಅವರವರ ನಿವಾಸದಲ್ಲಿ ಭೇಟಿಯಾಗಿದ್ದರು. ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಮೊದಲೇ ನಿರ್ಧರಿಸಿದ್ದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪರಮೇಶ್ವರ್ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಿರಲಿಲ್ಲ, ಕೋಮುವಾದಿಗಳ ಬಗ್ಗೆ ಜಾಗರೂಕರಾಗಿರಿ ಎಂದು ಪರಮೇಶ್ವರ್ ಸಲಹೆ ನೀಡಿದ್ದಾರೆ ರೆಡ್ಡಿ ತಿಳಿಸಿದರು.
ಇನ್ನೂ ಭಿನ್ನಮತಕ್ಕೆ ತೇಪೆ ಹಚ್ಚಲು ಮುಂದಾಗಿರುವ ರಾಜ್ಯಾ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ರಾಜ್ಯ ನಾಯಕರ ನಡುವೆ ಯಾವುದೇ ಅಸಮಾಧಾನವಿಲ್ಲ,  ನಾನು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಸೇರಿಯೇ ಎಲ್ಲಾ ನಿರ್ಧಾರಗಳನ್ನು ಕೈಗೊಂಡಿದ್ದೇವೆ, ನಾವು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಅಸಮಾಧಾನವಿಲ್ಲ, ಮೂವರು ಸಚಿವರು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರಿಗೆ ಬೇಕಾಗಿರುವವರೇ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರಮೇಶ್ವರ ಅವರ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನವನ್ನು ಅದೇ ಸಮಾಜಕ್ಕೆ ಕೊಡಬೇಕಿತ್ತು. ಆದರೆ, ಎಡಗೈ ಬಣಕ್ಕೆ ಕೊಡಲಾಗಿದೆ. ಮುಖ್ಯಮಂತ್ರಿ ಅವರ ಈ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com