ವೈದ್ಯರಿಗೆ ಥಳಿಸಿದವರಿಗೆ ಆರೋಗ್ಯಖಾತೆ ಕೊಡಿ: ಟ್ವಿಟರ್ ನಲ್ಲಿ ತಿವಾರಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿರುವ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಕುರಿತು ಕಾಂಗ್ರೆಸ್‌ ನಾಯಕ ಮನೀಷ್‌ ತಿವಾರಿ ವ್ಯಂಗ್ಯವಾಡಿದ್ದಾರೆ
ಅನಂತ್‌ ಕುಮಾರ್‌ ಹೆಗಡೆ
ಅನಂತ್‌ ಕುಮಾರ್‌ ಹೆಗಡೆ
Updated on
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿರುವ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಕುರಿತು ಕಾಂಗ್ರೆಸ್‌ ನಾಯಕ ಮನೀಷ್‌ ತಿವಾರಿ ವ್ಯಂಗ್ಯವಾಡಿದ್ದಾರೆ.  "ವೈದ್ಯರ ಮೇಲೆ ದೈಹಿಕ ಹಲ್ಲೆ ನಡೆಸಿದ  ಸಂಸದರಿಗೆ ಮೋದಿ ಆರೋಗ್ಯ ಖಾತೆ ಕೊಡಬಹುದು" ಎಂದು ಟ್ವೀಟ್‌ ಮಾಡಿದ್ದಾರ್ರೆ.
ಪ್ರಬಲ ಹಿಂದುತ್ವ ಪ್ರತಿಪಾದಕ,ಉತ್ತರ ಕನ್ನಡದಿಂದ 5 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅನಂತ್‌ ಕುಮಾರ್‌ ಹೆಗಡೆ ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಜನವರಿಯಲ್ಲಿ  ಶಿರಸಿಯ ಟಿಎಸ್‌ಎಸ್‌ ಆಸ್ಪತ್ರೆಗೆ ತಾಯಿಯನ್ನು ಚಿಕಿತ್ಸೆಗೆ ಕರೆದೊಯ್ದ ವೇಳೆ ವೈದ್ಯರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆಕ್ರೋಶಗೊಂಡಿದ್ದ  ಅನಂತ್‌ ಕುಮಾರ್‌ ಇಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಘಟನೆಯಲ್ಲಿ ವೈದ್ಯರ ತುಟಿ ಒಡೆದು ರಕ್ತ ಹೊರ ಬಂದಿತ್ತು. ಆದರೆ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com