ಸಿಎಂ ಸಿದ್ದರಾಮಯ್ಯ ಹಿಂದೂಗಳ ವಿರೋಧಿ: ಯಡಿಯೂರಪ್ಪ

ಸ್ವಾಮಿ ವಿವೇಕಾನಂದ ಅವರನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಸೋಮವಾರ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ಕೇಳಲು ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಸ್ವಾಮಿ ವಿವೇಕಾನಂದ ಅವರನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಸೋಮವಾರ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ಕೇಳಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿವಿಗಳಲ್ಲಿ ಭಾಷಣ ಟೆಲಿಕಾಸ್ಟ್ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಪ್ರದಾನಿ ಮೋದಿ ಅವರ ಹಿಂದುತ್ವ ಭಾಷಣವನ್ನು ಕೇಳುವಂತೆ ವಿದ್ಯಾರ್ಥಿಗಳನ್ನು ಬಲವಂತ ಮಾಡುವುದು ಸರಿಯಲ್ಲ,  ಮೋದಿ ಏನು ಮಾತನಾಡುತ್ತಾರೆ, ವಿವಿಗಳಲ್ಲಿ ಭಾಷಣ ಪ್ರಸಾರ ಮಾಡಲು ಸಿದ್ಧತೆ ಮಾಡಿರುವ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಹೇಳಿದ್ದರು.
ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು, ಸಿಎಂ ಹಿಂದೂಗಳ ವಿರೋಧಿಯಾಗಿದ್ದಾರೆ, ಅವರು ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಹಿಂದೂವೇ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ. 
ಮುಂದಿನ ಸೋಮವಾರ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಶತಮಾನೋತ್ಸವ ಕಾರ್ಯಕ್ರಮ ಮತ್ತು ಸ್ವಾಮಿ ವಿವೇಕಾನಂದ ಅವರ ಚಿಕಾಗೋ ಭಾಷಣ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದು,  ಎಲ್ಲಾ ವಿಶ್ವ ವಿದ್ಯಾನಿಲಯಗಳಲ್ಲೂ ಈ ಭಾಷಣದ ನೇರ ಪ್ರಸಾರವನ್ನು  ಮಾಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com