ನಾನು ಪ್ರಧಾನಿ ಹುದ್ದೆಗೆ ಸಿದ್ಧನಿದ್ದೇನೆ, ಅವಕಾಶ ಬಂದರೆ ಒಪ್ಪಿಕೊಳ್ಳುತ್ತೇನೆ. ಆದರೆ ಕಾಂಗ್ರೆಸ್ ನಲ್ಲಿ ಸಂಘಟನಾ ವ್ಯವಸ್ಥೆ ಇದ್ದು, ಆರಿಸಿ ಬರಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಕ್ಯಾಲಿಫೋರ್ನಿಯಾದ ಬರ್ಕ್ ಲೀ ಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಭಾರತಕ್ಕೆ 70 ವರ್ಷವಾದ ನೆನಪಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯವ್ಯಕ್ತಪಡಿಸಿದ್ದರು. ಚಿಕ್ಕಮಕ್ಕಳ ಮನಸ್ಥಿತಿ ಇರುವ ರಾಹುಲ್ ಗಾಂಧಿ ಪ್ರಧಾನಿ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು.