224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಿ ಗೆಲ್ಲುತ್ತೇನೆ: ಸಿದ್ದರಾಮಯ್ಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಉತ್ತರ ಕರ್ನಾಟಕ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿರುವ ಬೆನ್ನಲ್ಲೇ, ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಉತ್ತರ ಕರ್ನಾಟಕ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿರುವ ಬೆನ್ನಲ್ಲೇ, ರಾಜ್ಯದ ಬೇರೆ ಯಾವುದೇ ವಿಧಾನ ಸಭೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುತ್ತಿದೆ. 
ಈ ಸಂಬಂಧ ಮಂಗಳವಾರ ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದಿರುವ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್ ಸುದರ್ಶನ್ ಕೋಲಾರದ ಯಾವುದಾದರೂ ಕ್ಷೇತ್ರದಿಂದ ಸಿಎಂ ಸ್ಪರ್ಧಿಸಲು ಸೂಚಿಸುವಂತೆ ಮನವಿ ಮಾಡಿದ್ದಾರೆ.
ಮನವಿಯ ಹಿಂದೆ ರಾಜಕೀಯ ಲೆಕ್ಕಾಚಾರಗಳ ಉದ್ದೇಶವನ್ನು ನಿರಾಕರಿಸಿರುವ ಸುದರ್ಶನ್, ಒಂದು ವೇಳೆ ಸಿಎಂ ಕೋಲಾರ, ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದರೇ ಈ ಭಾಗದ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತದೆ ಎಂದು ಸುದರ್ಶನ್ ಹೇಳಿದ್ದಾರೆ.
ಇನ್ನೂ ಸುದರ್ಶನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ 224 ಕ್ಷೇತ್ರಗಳಲ್ಲಿ ಯಾವುದೇ ಸ್ಥಳದಲ್ಲಿಯೂ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಎಲ್ಲಿಂದಲಾದರೂ ಸ್ಪರ್ಧಿಸಲಿ, ಆದರೆ ಗೆಲುವು ಮಾತ್ರ ನಮ್ಮದೇ ಎಂದು ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಈ ಸಂಬಂಧ ಸೂಚಿಸಿದರೇ ಆಗ ಸುದರ್ಶನ್  ಪತ್ರದ ಬಗ್ಗೆ ಚರ್ಚಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಮಗೆ ಸೂಕ್ತ ಕ್ಷೇತ್ರವನ್ನ ಹುಡುಕುತ್ತಿರುವ  ಯಡಿಯೂರಪ್ಪ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಮಗ ರಾಘವೇಂದ್ರಗೆ ಬಿಟ್ಟು ಕೊಡಲಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com