ಬಿಎಸ್ ವೈ ಉ.ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿ ನಾನೇ ಅವರ ಎದುರಾಳಿ: ವರ್ತೂರು ಪ್ರಕಾಶ್

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲಿ..ನಾನೇ ಆವರ ಎದುರಾಳಿ ಎಂದು ಕೋಲಾರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ವರ್ತೂರು ಪ್ರಕಾಶ್-ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)
ವರ್ತೂರು ಪ್ರಕಾಶ್-ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲಿ..ನಾನೇ ಆವರ ಎದುರಾಳಿ ಎಂದು ಕೋಲಾರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
2018ರ ವಿಧಾನಸಭಾ ಚುನಾವಣೆಗೆ ಇನ್ನೂ ಹಲವು ತಿಂಗಳುಗಳ ಕಾಲ ಸಮಯವಿದ್ದರೂ ಅದಾಗಲೇ ಕರ್ನಾಟಕದಲ್ಲಿ ಚುನಾವಣಾ ರಣೋತ್ಸಾಹ ಆರಂಭವಾಗಿದೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಕೋಲಾರ ಶಾಸಕ ವರ್ತೂರು  ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷದಿಂದ ನಾನೇ ಬಿಎಸ್ ಯಡಿಯೂರಪ್ಪ ಅವರ ಎದುರಾಳಿ ಎಂದು ಹೇಳಿದ್ದಾರೆ.

ಮಾಧ್ಯಮವೊಂದು ವರದಿ ಮಾಡಿರುವಂತೆ  ಭಾನುವಾರ ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರು ಪ್ರಕಾಶ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಿಂದ  ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅವರು ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲಿ ನಾನು ಅವರ ಎದುರಾಳಿಯಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ ತಾವು ಶೀಘ್ರ ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ತಮಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದೆ ಎಂದು ವರ್ತೂರು ಪ್ರಕಾಶ್ ಹೇಳಿದ್ದಾರೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವರನ್ನು ಕಲಿಯುಗದ ಕೃಷ್ಣ ಎಂದು ಬಣ್ಣಿಸಿರುವ ವರ್ತೂರು ಪ್ರಕಾಶ್ ಬಿಎಸ್ ಯಡಿಯೂರಪ್ಪ ಅವರನ್ನು ಶಕುನಿ ಎಂದು ಟೀಕಿಸಿದ್ದಾರೆ. "ಯಡಿಯೂರಪ್ಪ ಅವರಿಂದಲೇ ಬಿಜೆಪಿ ಹಾಳಾಗ್ತಿದೆ. ಉತ್ತರ ಕರ್ನಾಟಕದಲ್ಲಿ ಯಡಿಯೂರಪ್ಪ ಸ್ಪರ್ಧೆ ಮಾಡಿದ್ರೆ, ಅವರ ವಿರುದ್ಧ ಕಾಂಗ್ರೆಸ್‌ನಲ್ಲಿ ನಾನು ಸ್ಪರ್ಧಿಸಲು ಸಿದ್ಧ ಎಂದು ಸವಾಲು ಎಸೆದಿದ್ದಾರೆ. ಮುಂಬುರುವ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗ್ತೇನೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರ ಮಿಷನ್ 150 ಠುಸ್ ಆಗಲಿದೆ" ಎಂದು ಟೀಕಿಸಿದ್ದಾರೆ.

ಪ್ರಸ್ತುತ ಪಕ್ಷೇತರ ಶಾಸಕರಾಗಿರುವ ವರ್ತೂರು ಪ್ರಕಾಶ್ ಸಿಎಂ ಸಿದ್ದರಾಮಯ್ಯ ಅವರ ಅಪ್ತರು ಎದೂ ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಅವರು ಶೀಘ್ರ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ದಟ್ಟವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com