ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿಪಕ್ಷಗಳು ಆರೋಪಪಟ್ಟಿ ಬಿಡುಗಡೆಗೆ ಮುಂದಾಗಿವೆ. ..
ಯಡಿಯೂರಪ್ಪ
ಯಡಿಯೂರಪ್ಪ
Updated on
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರತಿಪಕ್ಷಗಳು ಆರೋಪಪಟ್ಟಿ ಬಿಡುಗಡೆಗೆ ಮುಂದಾಗಿವೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ  ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ.
ರಾಜ್ಯ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಒಟ್ಟು 64 ಹಗರಣಗಳ ಆರೋಪ ಪಟ್ಟಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಕೇಂದ್ರ ಐಟಿ ಸಚಿವ ರವಿಶಂಕರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಡುಗಡೆ ಮಾಡಿದರು.
ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು. 
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ  ಚುನವಣಾ ಮಾಧ್ಯಮ ಕಚೇರಿಯನ್ನು ರವಿ ಶಂಕರ್ ಪ್ರಸಾದ್ ಉದ್ಘಾಟಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com