ಬಿಎಸ್ ವೈ, ರವಿಶಂಕರ್ ಪ್ರಸಾದ್, ಶೋಭಾ ವಿರುದ್ಧ ಕಾಂಗ್ರೆಸ್ ಕಾರ್ಪೊರೇಟರ್ ನಿಂದ ಮಾನನಷ್ಟ ಮೊಕದ್ದಮೆ?
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ನಿರ್ಧರಿಸಿದ್ದಾರೆ.
ಮಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ನಿರ್ಧರಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಇತ್ತೀಚೆಗಷ್ಟೇ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಮಾಡಿತ್ತು. ಈ ಚಾರ್ಜ್ ಶೀಟ್ ಪುಸ್ತಕದಲ್ಲಿ ಬಿಜೆಪಿ ತಮ್ಮ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾ ಕುಳಾಯಿ ಆರೋಪ ಮಾಡಿದ್ದಾರೆ.
ಈ ಸಂಬಂಧ ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕುಳಾಯಿ ದೂರು ದಾಖಲಿಸಿದ್ದಾರೆ. ಆದರೆ ಇದು ಕೋರ್ಟ್ ಮೊರೆ ಹೋಗಲು ಪೊಲೀಸರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಾ ಕುಳಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದ್ದಾರೆ.
ಈ ಬಗ್ಗೆ ವರದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಈ ವರೆಗೂ ಕ್ಷಮೆ ಕೋರಿಲ್ಲ, ಒಂದು ವೇಳೆ ಈಗ ಕ್ಷಮೆ ಕೋರಿದರೂ ಸಹ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ.