ರಾಜಕೀಯ

2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ ಟಿ ಸರಳಗೊಳಿಸುತ್ತೇವೆ: ರಾಹುಲ್ ಗಾಂಧಿ

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಕೀರ್ಣ ಸ್ವರೂಪದ ಜಿಎಸ್ ಟಿಯನ್ನು ಪೂರ್ಣವಾಗಿ ಬದಲಾಯಿ ಸರಳಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

2019ರಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬಂದರೆ ಜಿಎಸ್ ಟಿ ಸರಳಗೊಳಿಸುತ್ತೇವೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ದಾವಣಗೆರೆ : 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಕೀರ್ಣ ಸ್ವರೂಪದ ಜಿಎಸ್ ಟಿಯನ್ನು ಸಂಪೂರ್ಣವಾಗಿ ಬದಲಾಯಿಸಿ  ಸರಳಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿಂದು   ಜಿಎಸ್ ಟಿ ಹಾಗೂ ನೋಟ್ ಬ್ಯಾನ್ ಕುರಿತು ವರ್ತಕರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಹಾಗೂ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ಆರ್ಥಿಕ ನೀತಿಗಳು ಉದ್ಯಮಿಗಳಿಗೆ ಮಾತ್ರ ಅನುಕೂಲವಾಗಲಿವೆ. ಜಿಎಸ್ ಟಿಯನ್ನು ಸಂಕೀರ್ಣಗೊಳಿಸುವ ಮೂಲಕ ಗಬ್ಬರ್ ಸಿಂಗ್ ತೆರಿಗೆ ಮಾಡಲಾಗಿದೆ ಎಂದು ಆರೋಪಿಸಿದರು.

ಸಾರ್ವಜನಿಕರ ಹಣದೊಂದಿಗೆ ನೀರವ್ ಮೋದಿ ಹಾಗೂ ಮೆಹೂಲ್ ಚೊಕ್ಸಿ ದೇಶದಿಂದ ಪರಾರಿಯಾಗಿದ್ದಾರೆ. ಆರ್ ಬಿಐ, ನ್ಯಾಯಾಂಗ ಮತ್ತಿತರ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ನಾಶಪಡಿಸುತ್ತಿದೆ ಎಂದು ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು.

 ದೇಶದಲ್ಲಿನ ಪ್ರತಿಯೊಬ್ಬರ ಪ್ರಗತಿಯಲ್ಲಿ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಎಲ್ಲಾ ರಾಜ್ಯಗಳು, ಭಾಷೆಗಳು, ಅವರ ಸಂಪ್ರದಾಯ, ಮತ್ತು ಸಂಸ್ಕೃತಿಯನ್ನು ಕಾಂಗ್ರೆಸ್ ಗೌರವಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.