ಸರ್ಕಾರಿ ವಾಹನಗಳಲ್ಲಿ ಹಣ ಸಾಗಣೆ ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡಿದ ದೇವೇಗೌಡ

ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್‌ ಜೀಪ್ ಗಳಲ್ಲೇ ಚುನಾವಣೆಗೆ...
ಚುನಾವಣಾ ಆಯುಕ್ತರೊಂದಿಗೆ ಎಚ್ ಡಿ ದೇವೇಗೌಡ
ಚುನಾವಣಾ ಆಯುಕ್ತರೊಂದಿಗೆ ಎಚ್ ಡಿ ದೇವೇಗೌಡ
ಬೆಂಗಳೂರು: ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್‌ ಜೀಪ್ ಗಳಲ್ಲೇ ಚುನಾವಣೆಗೆ ಹಣ ಸಾಗಿಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಒ ಪಿ ರಾವತ್ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಸರ್ಕಾರದ ಕೆಲವು ಅಧಿಕಾರಿಗಳ ನಡವಳಿಕೆ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ. ನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಆದರೆ ಇದರ ಬಗ್ಗೆ ನನಗೆ ಅನುಮಾನ ಇದೆ ಅಂಥ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ಗೃಹ ಇಲಾಖೆಯಲ್ಲಿ ಕಾನೂನು ಸಡಿಲವಾಗಿದೆ. ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಕೆಂಪಯ್ಯ ಅವರ ಕಚೇರಿ ವಿಕಾಸಸೌಧದಿಂದ ತೆಗೆಯಲಾಗಿದೆ. ಆದರೆ ಅದು ಬೇರೆ ಕಡೆಗೆ ಶಿಫ್ಟ್ ಆಗಿದೆ ಎಂದು ದೇವೇಗೌಡ ಆರೋಪಿಸಿದರು.
ದೇವೇಗೌಡರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾವು ಯಾವುದೇ ಅಧಿಕಾರಿಗಳನ್ನು ಚುನಾವಣೆಗೆ ದುರ್ಬಳಕೆ ಮಾಡಿಕೊಂಡಿಲ್ಲ. ಈ ರೀತಿ ಆರೋಪ ಮಾಡಿರುವ ದೇವೇಗೌಡರೇ ದುರ್ಬಳಕೆ ಮಾಡಿಕೊಂಡಿರಬಹುದು ಎಂದು ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com