ಯಡಿಯೂರಪ್ಪನವರು 4 ಕೋಟಿ ರೂ. ಲಂಚ ಪಡೆದಿದ್ದರು: ವಿ.ಎಸ್.ಉಗ್ರಪ್ಪ ಆರೋಪ

ಮುಖ್ಯಮಂತ್ರಿ ಸಿದ್ದರಾಮಯಯ್ಯನವರ ಸರ್ಕಾರ 10% ಕಮಿಷನ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ...
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯಯ್ಯನವರ ಸರ್ಕಾರ 10% ಕಮಿಷನ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿಯವರ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಮುರುಡೇಶ್ವರ ಪವರ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯಿಂದ 4.11 ಕೋಟಿ ಲಂಚ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ಮೂರು ಮಹತ್ವದ ದಾಖಲೆ ಬಿಡುಗಡೆಗೊಳಿಸಿದರು,. ಭದ್ರಾ ಮೇಲ್ದಂಡೆ ಯೋಜನೆ ಗುತ್ತಿಗೆಗೆ ಸಂಬಂಧಿಸಿದಂತೆ ಬಿಎಸ್​ವೈ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ರಮ ನಡೆದಿದ್ದು, ಅವರು ನೇರವಾಗಿ ಮುರುಡೇಶ್ವರ ಪವರ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯಿಂದ ಲಂಚ ಪಡೆದಿದ್ದಾರೆ ಎಂದು ಆರೋಪ ಮಾಡಿದರು.

2008ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಗುತ್ತಿಗೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಸಂದರ್ಭದಲ್ಲಿ 1030 ಕೋಟಿ ರೂಪಾಯಿಯ ಗುತ್ತಿಗೆಯು ಆರ್‌ಎಂಐಸಿಯ ಸಹಸಂಸ್ಥೆಯಾಗಿರುವ ಮುರಡೇಶ್ವರ ಪವರ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯ ಪಾಲಾಗಿತ್ತು. ಆರ್‌ಎಂಐಸಿಗೆ ಗುತ್ತಿಗೆ ನೀಡಲು ಆದೇಶಿಸಿದವರ ಪಟ್ಟಿಯಲ್ಲಿ ಯಡಿಯೂರಪ್ಪ ಹೆಸರೂ ಇದೆ ಎಂದು ಅವರು ಉಗ್ರಪ್ಪ ಆರೋಪಿಸಿದ್ದಾರೆ ಹಾಗೂ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆಗೊಳಿಸಿದರು.

ಉಗ್ರಪ್ಪ ಹೇಳಿಕೆಗೆ ಬಿಜೆಪಿ ಸ್ಪಷ್ಟನೆ: ಇಂತಹ ಆರೋಪವನ್ನು ಉಗ್ರಪ್ಪ ಅವರು ಈ ಹಿಂದೆ ಕೂಡ ಮಾಡಿದ್ದು ಯಡಿಯೂರಪ್ಪನವರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಖಾಸಗಿ ಕಂಪೆನಿಯ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ವರದಿ ಸಲ್ಲಿಸಿ ಈಗಾಗಲೇ ಕೇಸು ಮುಚ್ಚಿಹಾಕಲಾಗಿದೆ. ತೆರಿಗೆ ಸಲಲಿಕೆ ವಿಷಯದಲ್ಲಿ ಐಟಿ ಇಲಾಖೆ ನೀಡಿರುವ ನೊಟೀಸ್ ಗೆ ಯಡಿಯೂರಪ್ಪನವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com