ರಾಹುಲ್ ಗಾಂಧಿಗೆ ಸತ್ವ ಪರೀಕ್ಷೆಯಾಗಿರುವ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ

ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ...
ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ
ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ

ನವದೆಹಲಿ: ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಭರವಸೆ ನೀಡಿದ್ದರು. ಆದರೆ ತಮ್ಮ ಮಗನಿಗಾಗಿ ಮೈಸೂರಿನ ವರುಣಾ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನೆ ರಾಹುಲ್ ಗಾಂಧಿಯವರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸಿದೆ.

2008 ಮತ್ತು 2013ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದು ಬಂದಿದ್ದ ಸಿದ್ದರಾಮಯ್ಯ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 1983ರಲ್ಲಿ ಸಿದ್ದರಾಮಯ್ಯನವರ ರಾಜಕೀಯ ಬದುಕಿಗೆ ಚಾಮುಂಡೇಶ್ವರಿ ಕ್ಷೇತ್ರ ಮುನ್ನಡೆ ನೀಡಿತ್ತು.

2008ರಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವವರೆಗೆ ಸಿದ್ದರಾಮಯ್ಯನವರು 5 ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕೆಲ ದಿನಗಳ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದ ಮತದಾರರೊಂದಿಗೆ ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ ಎಂದು ಭಾವನಾತ್ಮಕವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಪುತ್ರ ಯತೀಂದ್ರನನ್ನು ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಈ ಬಾರಿ ಒಲವು ತೋರಿದ್ದಾರೆ. ಯತೀಂದ್ರ ಅವರಿಗೆ ವಿರುದ್ಧವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧಿಯನ್ನು ಯೋಚಿಸಿ ಕಣಕ್ಕಿಳಿಸಬೇಕಾಗಿರುವುದರಿಂದ ರಾಹುಲ್ ಗಾಂಧಿಯವರಿಗೆ ಟಿಕೆಟ್ ನೀಡುವುದು ಸಂಕಷ್ಟವಾಗಿದೆ.

ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನು ರಾಹುಲ್ ಗಾಂಧಿಯವರು ಮುಂದಿನ ವಾರ ನಡೆಸಲಿದ್ದು ಅಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಕರ್ನಾಟಕದ ಎಐಸಿಸಿ ಸ್ಕ್ರೀನಿಂಗ್ ಸಮಿತಿಯ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ, ರಾಜ್ಯ ಘಟಕ ಸೂಚಿಸುವ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ಸಮಗ್ರ ಅಧಿವೇಶನದಲ್ಲಿ ಪಕ್ಷದ ರಾಜಕೀಯ ಹಿತಾಸಕ್ತಿಗಾಗಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಹೇಳಿದ್ದರು. ಗುಜರಾತ್ ಚುನಾವಣೆಯ ಉದಾಹರಣೆ ನೀಡಿದ್ದ ರಾಹುಲ್ ಗಾಂಧಿ, ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಬಲ ಸಿಕ್ಕಿ ಬಿಜೆಪಿ ತೀವ್ರ ಪೈಪೋಟಿ ನೀಡಬಹುದೆಂದು ಹೇಳಿದ್ದರು.

ಪಕ್ಷದ ಪರಿಸ್ಥಿತಿ ಚೆನ್ನಾಗಿಯೇ ಇದೆ ಎಂದು ಹೇಳಿದರೂ ಕೂಡ ಕಾಂಗ್ರೆಸ್ ನ ಆಪ್ತ ವಲಯದಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಪರಿಸ್ಥಿತಿ ಅನುಕೂಲವಾಗಿಲ್ಲ ಎಂದು ಹೇಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಎಸ್ ಆರ್ ಪಾಟೀಲ್ ಸಮತೋಲದ ಕೆಲಸ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com