ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಲು ಒಕ್ಕಲಿಗರು ಚಿಂತನೆ

: ತಾವು ಪ್ರತಿನಿಧಿಸುತ್ತಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 

ಬೆಂಗಳೂರು: ತಾವು ಪ್ರತಿನಿಧಿಸುತ್ತಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರನ್ನು ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಸಾಹಸಪಡುತ್ತಿದ್ದರೂ ಕೂಡ ಇಲ್ಲಿನ ಒಕ್ಕಲಿಗ ಯುವಸಮೂಹ ಕಾಂಗ್ರೆಸ್ ವಿರುದ್ಧ ಮತ ಹಾಕಲು ನಿರ್ಧರಿಸಿದೆ.

ಜಿಲ್ಲಾ ಒಕ್ಕಲಿಗ ಯುವ ವೇದಿಕೆ ಅಧ್ಯಕ್ಷ ಎನ್.ರಾಜ್ ಕುಮಾರ್ ನೇತೃತ್ವದಲ್ಲಿ ವೇದಿಕೆಯ ಸದಸ್ಯರು ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ವಿರುದ್ಧ ಮತ ಹಾಕಲು ಸಂಕಲ್ಪ ಮಾಡಿದ್ದಾರೆ. ಅಲ್ಲದೆ ತಮ್ಮ ಸಮುದಾಯದವರಿಗೆ ಸಿದ್ದರಾಮಯ್ಯನವರಿಗೆ ಬೆಂಬಲ ನೀಡದಂತೆ ಮನವಿ ಮಾಡಿದ್ದಾರೆ.

ಅವರ ರಾಜಕೀಯ ಭವಿಷ್ಯದಲ್ಲಿ ಒಂದು ಕಾಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಒಕ್ಕಲಿಗ ಸಮುದಾಯದವರ ವಿರುದ್ಧ ಸಿದ್ದರಾಮಯ್ಯನವರು ಇಂದು ಒಕ್ಕಲಿಗರ ವಿರುದ್ಧವೇ ದ್ವೇಷ ಸಾಧಿಸುತ್ತಿದ್ದಾರೆ ಎಂಬುದು ಅವರ ಆರೋಪವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com