ರಾಜಕೀಯ

ಕಾಂಗ್ರೆಸ್ ವಿರುದ್ಧ 2 ನೇ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ , ದುರಾಡಳಿತ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಬಿಜೆಪಿ ಎರಡನೇ ಚಾರ್ಜ್ ಶೀಟ್ ನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ವಿರುದ್ಧ 2 ನೇ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ
2ನೇ ಚಾರ್ಜ್ ಶೀಟ್ ಬಿಡುಗಡೆಗೊಳಿಸಿದ ಪ್ರಕಾಶ್ ಜಾವಡೇಕರ್
Published On :

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ , ದುರಾಡಳಿತ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಎರಡನೇ ಚಾರ್ಜ್ ಶೀಟ್ ನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್  ದುರಾಡಳಿತ  ಅಧಿಕಾರದ ದುರುಪಯೋಗ ಹಾಗೂ  ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ  ಭ್ರಷ್ಟಾಚಾರ  ಹೆಸರಿನಡಿ  ಚಾರ್ಜ್ ಶೀಟ್ ಬಿಡುಗಡೆ ಮಾಡಿದ   ಪ್ರಕಾಶ್ ಜಾವಡೇಕರ್, ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ, ಸಚಿವ ಡಿ. ಕೆ. ಶಿವಕುಮಾರ್  ಅಕ್ರಮ ಆಸ್ತಿ ಗಳಿಕೆ, ಹಾಸಿಗೆ-ದಿಂಬು ಹಗರಣ, ವಕ್ಫ್ ಆಸ್ತಿ ಕಬಳಿಕೆ,  ಡೈರಿ ಹಗರಣ  ಸೇರಿ ಸಾಕಷ್ಟು ಹಗರಣ ನಡೆದಿವೆ. ಯುಪಿಎ 10 ವರ್ಷದಲ್ಲಿ ನಡೆಸಿದ ಸರಣಿ ಹಗರಣಗಳ ಮಾದರಿಯಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವೂ ಭಾರೀ ಅಕ್ರಮದಲ್ಲಿ ತೊಡಗಿದೆ ಎಂದು ಹೇಳಿದರು.

ನಾಲಾ ನಿರ್ಮಾಣ , ಅಭಿವೃದ್ಧಿ ಸಂಬಂಧ 157 ಕೋಟಿ ರೂ. ಮೊತ್ತದ ಕಾಮಗಾರಿಯ ಟೆಂಡರ್ ನಲ್ಲಿ ಅಕ್ರಮದ ಬಗ್ಗೆ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ನಡೆಸುವ ಬಗ್ಗೆ ಮಾಹಿತಿ ಪಡೆದು ಎರಡು ದಿನ ಮೊದಲೇ ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.