ಮಾಜಿ ಸಿಎಂ ಎಸ್ ಎಂ ಕೃಷ್ಣ ಮತ್ತೆ ಕಾಂಗ್ರೆಸ್ ಗೆ ವಾಪಸ್?

ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬದಲಾದ ಪರಿಸ್ಥಿತಿಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬದಲಾದ ಪರಿಸ್ಥಿತಿಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಈ ಹಿಂದೆ ಬಿಜೆಪಿ ಸೇರಿದ್ದ ಎಸ್ ಎಂ ಕೃಷ್ಣ ತಮ್ಮ ಕುಟುಂಬಸ್ಥರಿಗಾಗಿ ಮದ್ದೂರು ಮತ್ತು ಮೈಸೂರಿನಿಂದ ಟಿಕೆಟ್ ಕೇಳಿದ್ದರಂತೆ. ಆದರೆ ಎಸ್ ಎಂಕೆ  ಮನವಿಗೆ ಬಿಜೆಪಿ ಪಾಳಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಬಿಜೆಪಿ ನೇರ ತಿರುಗೇಟು ನೀಡಿರುವ ಎಸ್ ಎಂಕೆ ಸ್ವತಂತ್ರ್ಯ ನಿರ್ಧಾರ ಕೈಗೊಳ್ಳಲು ನಾನು ಶಕ್ತ ಎಂಬ ಖಡಕ್ ಸಂದೇಶವನ್ನು ಬಿಜೆಪಿ ಹೈಕಮಾಂಡ್ ಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎಸ್ ಎಂಕೆ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳುತ್ತಿಲ್ಲ. ಬಿಜೆಪಿ ಮುಖಂಡರೂ ಕೂಡ ಎಸ್ ಎಂಕೆ ಅವರನ್ನು ಪ್ರಚಾರಕ್ಕೆ ಆಹ್ವಾನಿಸಿಲ್ಲ ಎನ್ನಲಾಗಿದೆ.
ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲೂ ಹಲವಾರು ಕುತೂಹಲಕಾರಿ ಚಟುವಟಿಕೆಗಳು ನಡೆದಿದ್ದು, ಎಸ್ ಎಂಕೆಯನ್ನು ಕಾಂಗ್ರೆಸ್ ಗೆ ವಾಪಸ್ ಕರೆತರುವ ನಿಟ್ಟಿನಲ್ಲಿ ಪಕ್ಷದಲ್ಲಿರುವ ಅವರ ಆಪ್ತ ಸಚಿವರು ಮತ್ತು ಶಾಸಕರು ಹೈಕಮಾಂಡ್ ಮನವೊಲಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ದೆಹಲಿಯಲ್ಲಿ ನಾಯಕರೊಂದಿಗೆ ಚರ್ಚೆ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಎಸ್ ಎಂಕೆ ಪಕ್ಷಕ್ಕೆ ವಾಪಸ್ ಆಗುವುದಾದರೆ ತಮ್ಮದೇನೂ ಅಭ್ಯಂತರವಿಲ್ಲ ಎಂಬ ಮಾತನ್ನು ಹೇಳಿದ್ದಾರೆ ಎನ್ನಲಾಗಿದೆ.
ಅಂತೆಯೇ ಸ್ವತಃ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಇದೀಗ ಎಸ್ ಎಂ ಕೃಷ್ಣ ಅವರಿಗೆ ಪಕ್ಷಕ್ಕೆ ವಾಪಸ್ ಆಗಲು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಇಂಧನ ಸಚಿವ ಮತ್ತು ಎಸ್ ಎಂಕೆ ಆಪ್ತ ಡಿಕೆ ಶಿವಕುಮಾರ್ ಅವರ ನೇತೃತ್ವದ ಒಂದು ತಂಡ ಎಸ್ ಎಂಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಕಾಂಗ್ರೆಸ್ ನಿಂದ ಮದ್ದೂರು ಕ್ಷೇತ್ರಕ್ಕೆ ಎಸ್ ಎಂಕೆ ಕುಟುಂಬಕ್ಕೆ ಒಂದು ಟಿಕೆಟ್ ಮೀಸಲಿಡುವ ಭರವಸೆ ನೀಡಿ ಅವರನ್ನು ಪಕ್ಷಕ್ಕೆ ವಾಪಸ್ ಬರುವಂತೆ ಸಂಧಾನ ನಡೆಸಲಾಗಿದೆ ಎನ್ನಲಾಗಿದೆ.
ಒಟ್ಟಾರೆ ರಾಜ್ಯ ರಾಜಕಾರ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕಾಂಗ್ರೆಸ್ ಸಂಧಾನಕ್ಕೆ ಎಸ್ ಎಂಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com