‘ಬಿಜೆಪಿ ತೊರೆಯಲು ನನಗೆ ಯಾವುದೇ ಕಾರಣವಿಲ್ಲ, ನಾನೇಕೆ ಕಾಂಗ್ರೆಸ್‌ಗೆ ಹೋಗಬೇಕು'?

ಮಾಜಿ ಸಿಎಂ ಎಸ್ ಎಂ ಕೃಷ್ಣ ಬಿಜೆಪಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ತಮ್ಮ ಪುತ್ರಿಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರುತ್ತಿದ್ದಾರೆ, ...
ಎಸ್ ,ಎಂ ಕೃಷ್ಣ
ಎಸ್ ,ಎಂ ಕೃಷ್ಣ
ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಬಿಜೆಪಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ತಮ್ಮ ಪುತ್ರಿಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರುತ್ತಿದ್ದಾರೆ, ಕಾಂಗ್ರೆಸ್‌ ಪ್ರಮುಖರ ಜತೆ ಈ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ ಎಂದು ಖಾಸಗಿ ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿದ್ದವು.
ಸದ್ಯ ಮುಂಬಯಿಯಲ್ಲಿರುವ ಕೃಷ್ಣ ಮಾಧ್ಯಮಗಳಿಗೆ  ಪ್ರತಿಕ್ರಿಯೆ  ‘ಬಿಜೆಪಿ ತೊರೆಯಲು ನನಗೆ ಯಾವುದೇ ಕಾರಣವಿಲ್ಲ, ನಾನೇಕೆ ಕಾಂಗ್ರೆಸ್‌ಗೆ ಹೋಗಬೇಕು’ ಮತ್ತೆ ಕಾಂಗ್ರೆಸ್ ಸೇರುವ ಸುದ್ದಿ ಕಸದ ಬುಟ್ಟಿಗೆ ಹಾಕುವಂತ ವಿಷಯವಾಗಿದೆ ಎಂದು ಹೇಳಿದ್ದಾರೆ. 
ಕೃಷ್ಣ ಅವರ ಪುತ್ರಿ ಶಾಂಭವಿ ಅವರಿಗೆ ಮದ್ದೂರು, ಮಂಡ್ಯ ಅಥವಾ  ರಾಜ ರಾಜೇಶ್ವರಿ ನಗರದಿಂದ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹರಿದಾಡಿದ್ದವು, ಆದರೆ ಬಿಜೆಪಿ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಶಾಂಭವಿ ಹೆಸರಿಲ್ಲ, ರಾಜರಾಜೇಶ್ವರಿ ನಗರಕ್ಕೆ ಬಿಜೆಪಿಯಿಂದ ಮುನಿರಾಜು ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಮದ್ದೂರು ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ, 
ಒಕ್ಕಲಿಗ ಸಮುದಾಯದ ಪ್ರಭಾವಶಾಲಿ ನಾಯಕರಾಗಿರುವ ಎಸ್ ಎಂ ಕೃಷ್ಣ ಅವರಿಗೆ ಬೆಂಗಳೂರಿನಲ್ಲಿ ಅಪಾರ ಮತದಾರರಿದ್ದಾರೆ, ನಮ್ಮ ಶತೃಗಳು ಈ ವಿಷಯವನ್ನು ಹಬ್ಬಿಸುತ್ತಿದ್ದಾರೆ, ಮುಪಂದಿನ ದಿನಗಳಲ್ಲಿ ಅವರು ಪಕ್ಷದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಬಿಜೆಪಿಯಲ್ಲಿರುವ ಎಸ್‌.ಎಂ.ಕೃಷ್ಣ ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅವರು ಜೆಡಿಎಸ್‌ಗೆ ಬರುವುದಾದರೆ ಸ್ವಾಗತ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
ಈ ಸಂಬಂಧ ಪ್ರತಿಕ್ರಿಯಿಸಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿರಾಕರಿಸಿದರು. ಸಂಜೆ ವಿಷಯ ಸಂಬಂಧ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಮುರುಳಿಧರ ರಾವ್ ಕೃಷ್ಣ ಅವರು ಬಿಜೆಪಿಯಲ್ಲಿಯೇ ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com