ವಿಧಾನಸಭೆ ಚುನಾವಣೆ: ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿರುವ ಎಂಇಎಸ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಸ್ಥಿತ್ವವನ್ನು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಸ್ಥಿತ್ವವನ್ನು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಳಗಾವಿ ಮತ್ತು ಬೀದರ್ ಜಿಲ್ಲೆಯಲ್ಲಿ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೆಲವು ಬಿಜೆಪಿ ನಾಯಕರು ಬೆಂಬಲ ನೀಡಿರುವುದರಿಂದ ಜನರು ಬಿಜೆಪಿಯನ್ನು ವಿರೋಧಿಸಿ ಹಿಂದೂ ಮರಾಠ ಮತ ಗಳಿಕೆಗೆ ಅನುಕೂಲವಾಗಬಹುದು ಎಂಬುದು ಎಂಇಎಸ್ ನಾಯಕರ ಅಭಿಪ್ರಾಯವಾಗಿದೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಮಾಜಿ ಶಾಸಕ ಹಾಗೂ ಎಂಇಎಸ್ ನಾಯಕ ಮನೋಹರ್ ಕಿನೆಕರ್, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ, ಖಾನಾಪುರ, ನಿಪ್ಪಾಣಿ ಕ್ಷೇತ್ರಗಳು ಮತ್ತು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಔರಾದ್ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.
.
ಏಪ್ರಿಲ್ 15 ಅಥವಾ 16ರ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಅದಕ್ಕೂ ಮುನ್ನ ಮಹಾರಾಷ್ಟ್ರ ಏಕೀಕರಣ ಸಮಿತಿಯ ಎಲ್ಲಾ ಘಟಕಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

 ಹಿಂದೂ ಮರಾಠ ಮತಗಳಿಗೆ ಬೆಂಬಲ ಗಳಿಸಿರುವ ಪಕ್ಷ ಆ ಪ್ರದೇಶದಲ್ಲಿ ಪ್ರಮುಖ ರಾಜಕೀಯ ಪ್ರಭಾವ ಹೊಂದಿದೆ. ಆದರೆ ಇತ್ತೀಚೆಗೆ ಹಿಂದೂ ಮತಗಳು ಬಿಜೆಪಿಗೆ ಹಂಚಿಕೆಯಾಗುತ್ತಿರುವುದರಿಂದ ಎಂಇಎಸ್ ಶಾಸಕರ ಸಂಖ್ಯೆ ಎರಡಕ್ಕಿಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com