ನಗದು ಮೊತ್ತ ರು. 50 ಸಾವಿರಕ್ಕಿಂತ ಹೆಚ್ಚು ಇದ್ದರೆ, ಅದಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳಿಗೆ ವಿವರಣೆ ನೀಡಬೇಕು. ರು. 10 ಲಕ್ಷಕ್ಕಿಂತ ಹೆಚ್ಚು ನಗದು ಒಯ್ಯುತ್ತಿದ್ದರೆ ಅಂತಹವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗುತ್ತದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಚಾರಣೆ ನಡೆಸುತ್ತಾರೆ. ಸೂಕ್ತ ವಿವರಣೆ ಮತ್ತು ದಾಖಲೆಗಳು ಇಲ್ಲದಿದ್ದರೆ ನಗದು ವಶಕ್ಕೆ ತೆಗೆದುಕೊಳ್ಳುತ್ತಾರೆ. ವಿವರಣೆ ಮತ್ತು ದಾಖಲೆ ನೀಡಿದರೆ ಹಣವನ್ನು ಬಿಡುಗಡೆ ಮಾಡುತ್ತಾರೆ ಎಂದರು.