ಇಂದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರಿಗೆ ಮಠದ ಪರವಾಗಿ ಸನ್ಮಾನ ಮಾಡಲಾಯಿತು. ಬಳಿಕ ಪ್ರಸಾದ ನಿಲಯ ನಿರ್ಮಾಣಕ್ಕೆ 30 ಲಕ್ಷ ರುಪಾಯಿ ಹಾಗೂ ಮಠದ ಆವರಣದಲ್ಲಿ ಬಾತ್ ರೂಮ್ ಮತ್ತು ಶೌಚಾಲಯ ನಿರ್ಮಾಣಕ್ಕೆ 20 ಲಕ್ಷ ರುಪಾಯಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿಯ ಹೆಸರಿಡಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಪರಮರೂಢ ಶ್ರೀಗಳಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವೊಂದನ್ನು ಬಿಜೆಪಿ ಅಧ್ಯಕ್ಷರಿಗೆ ಸಲ್ಲಿಸಲಾಯಿತು.