ಕರ್ನಾಟಕ ಚುನಾವಣೆ: ಏ. 15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಏ.15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ಬಿಜೆಪಿ ಚಿಹ್ನೆ
ಬಿಜೆಪಿ ಚಿಹ್ನೆ

ನವದೆಹಲಿ: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಏ.15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆಯಲಿದ್ದು,  ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.ಏ. 8 ರಂದು ನಡೆದಿದ್ದ  ಸಭೆಯಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ , ಹಣಕಾಸು ಸಚಿವ ಅರುಣ್ ಜೇಟ್ಲಿ,  ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಈ ಸಮಿತಿಯಲ್ಲಿದ್ದಾರೆ.

225 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 12 ರಂದು ತುನಾವಣೆ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com