ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಿಂದ ನಾಳೆ 224 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಬಿಡುಗಡೆ?

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರ್ವ ಸನ್ನದ್ಧವಾಗಿರುವ ಕಾಂಗ್ರೆಸ್ ಪಕ್ಷ ನಾಳೆ ಎಲ್ಲ 224 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಘೋಷಣೆ ಮಾಡುವ ಸಾಧ್ಯತೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರ್ವ ಸನ್ನದ್ಧವಾಗಿರುವ ಕಾಂಗ್ರೆಸ್ ಪಕ್ಷ  ನಾಳೆ ಎಲ್ಲ 224 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ಘೋಷಣೆ ಮಾಡುವ ಸಾಧ್ಯತೆ.
ಈಗಾಗಲೇ ಬಿಜೆಪಿ, ಜೆಡಿಎಸ್‌ ಪಕ್ಷಗಳು ತಮ್ಮ ತಮ್ಮ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಏಕಕಾಲದಲ್ಲೇ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ. 
ಮೂಲಗಳ ಪ್ರಕಾರ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಾಳೆ ಸಂಜೆ 3 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, ಸುದ್ದಿಗೋಷ್ಛಿಯಲ್ಲೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಮುಖ್ಯಮಂತ್ರಿ  ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದು, ಅವರೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. 
ಇನ್ನು ಮೇ 12ರಂದು ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು. ಸಭೆ ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್​ ಮಾತನಾಡಿ, ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್​ ಆಗಿಲ್ಲ. ನಾಳೆ ಮತ್ತೊಂದು ಸಭೆ ನಡೆಸಿ ಬಳಿಕ ಒಂದೇ ದಿನ ಎಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಲ್ಲಿಯವರೆಗೂ ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲೇ ಇರುತ್ತೇವೆ ಎಂದು ಹೇಳಿದರು.
ಅಂತೆಯೇ ಟಿಕೆಟ್ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರ ನಡುವೆ ಯಾವುದೇ ವೈಮನಸ್ಸು ಇಲ್ಲ. ಪಕ್ಷದಲ್ಲೂ ಕೂಡ ಯಾರಿಗೂ ಟಿಕೆಟ್ ಹಂಚಿಕೆ ಸಂಬಂಧ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಬಿಡುಗಡೆ ಮಾಡಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com