ಕಾಂಗ್ರೆಸ್ ಲೋಗೋ
ರಾಜಕೀಯ
ರಾಜ್ಯ ವಿಧಾನಸಭೆ ಚುನಾವಣೆ: ತಮ್ಮ ನಿಷ್ಠರ ಪರ ಕಾಂಗ್ರೆಸ್ ಹಿರಿಯ ನಾಯಕರ ಬ್ಯಾಟಿಂಗ್
: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿರುವುದಕ್ಕೆ ಪಕ್ಷದ ಹಲವರ ವಿರೋಧ ವ್ಯಕ್ತವಾಗಿದ್ದು, ಪಟ್ಟಿ ಬಿಡುಗಡೆಗೆ...
ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿರುವುದಕ್ಕೆ ಪಕ್ಷದ ಹಲವರ ವಿರೋಧ ವ್ಯಕ್ತವಾಗಿದ್ದು, ಪಟ್ಟಿ ಬಿಡುಗಡೆಗೆ ಮತ್ತಷ್ಟು ವಿಳಂಬವಾಗಲಿದೆ. ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಕೊಡುವ ಸಂಬಂಧ ಭಿನ್ನಮತ ಮೂಡಿದೆ,
ಗೆಲ್ಲುವ ಸಾಮರ್ಥ್ಯವನ್ನು ಗಮನದಲ್ಲಿರಿಸಿಕೊಂಡು ವಲಸಿಗರಿಗೆ ಟಿಕೆಟ್ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಆದರೆ ಪಕ್ಷದ ಹಿರಿಯ ಮುಖಂಡರು ಸಿದ್ದರಾಮಯ್ಯ ಅವರ ಈ ನಡೆಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಆರಂಭಿಕ ಹಂತಕದ ಚರ್ಚೆ ವೇಳೆ, ಖರ್ಗೆ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ ವಲಸಿಗರಿಗೆ ಮಣೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.
ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್ ಸಿಎಂ ಅವರಿಗೆ ಸಂಪೂರ್ಣ ಸ್ವತಂತ್ರ್ಯ ನೀಡಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ