ಪವನ್ ಕಲ್ಯಾಣ್ ಪ್ರಚಾರ ಯಾರ ಪರ: ಬಿಜೆಪಿ ಅಥವಾ ಜೆಡಿಎಸ್?

ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ತೆಲುಗು ಜನ ಪ್ರಾಬಲ್ಯವಿರುವ ಕ್ಷೇತ್ರಗಳಾದ ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ..
ಪವನ್ ಕಲ್ಯಾಣ್
ಪವನ್ ಕಲ್ಯಾಣ್
Updated on: 
ಕೋಲಾರ/ ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ ನಾಯಕರು, ಕಾರ್ಯಕರ್ತರು ಹಾಗೂ ಸಿನಿಮಾ ತಾರೆಗಳು ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ.
ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ತೆಲುಗು ಜನ ಪ್ರಾಬಲ್ಯವಿರುವ ಕ್ಷೇತ್ರಗಳಾದ ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ - ಆಂಧ್ರ- ತೆಲಂಗಾಣ ಗಡಿ ಭಾಗದ ಜನರ ಮತ ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಪ್ರಯತ್ನಿಸುತ್ತಿವೆ.ಆದರೆ ಪವನ್ ಕಲ್ಯಾಣ್ ಯಾವ ಪಕ್ಷದ ಪರ ಪ್ರಚಾರ ನಡೆಸುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ, 
ಪವನ್ ತಮ್ಮ ಪರ ಪ್ರಚಾರ ನಡೆಸುತ್ತಾರೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನವೀನ್ ಕಿರಣ್ ಹೇಳಿದ್ದಾರೆ, ಜೊತೆಗೆ ಜೆಡಿಎಸ್  ಪಕ್ಷದ ಅಭ್ಯರ್ಥಿಗಳ ಪರವೂ ಪ್ರಚಾರ ನಡೆಸಬಹುದು, ಆದರೆ ನಾನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೇ ಪವನ್ ನನ್ನ ಪರ ಪ್ರಚಾರ ನಡೆಸುತ್ತಾರೆ ಎಂದು ಹೇಳಿದ್ದಾರೆ.
ನವೀನ್ ಮಾಜಿ ಶಾಸಕ ಸಿವಿ ವೆಂಕಟರಾಯಪ್ಪ ಅವರ ಮೊಮ್ಮಗನಾಗಿದ್ದು,  ತಮ್ಮ ಸಂಬಂಧಿ ರಮೇಶ್ ಎಂಬುವರಿಗೆ ಪವನ್ ಕಲ್ಯಾಣ್ ಫ್ಯಾಮಿಲಿ ಫ್ರೆಂಡ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಇನ್ನೂ ನಟ ಪವನ್ ಕಲ್ಯಾಣ್ ಜೊತೆ ಚರ್ಚಿಸಿಲ್ಲ ಎಂದು ತಿಳಿಸಿದ್ದಾರೆ.
ಆದರೆ ಇದೇ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಬಚ್ಚೇಗೌಡ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿರುವ ಬಲಿಜ ಸಮುದಾಯದ ಮತ ಸೆಳೆಯಲು ಪವನ್ ಕಲ್ಯಾಣ್ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ, ಎಚ್ ಡಿ ಕುಮಾರ ಸ್ವಾಮಿ ಪವನ್ ಕಲ್ಯಾಣ್ ರನ್ನು ಈ ಭಾಗದ ಪ್ರಚಾರಕ್ಕೆ ಕರೆ ತರುತ್ತಾರೆ ಎಂದು ಹೇಳಿದ್ದಾರೆ.
ಗೌರಿ ಬಿದನೂರುಸ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ಶ್ರೀನಿವಾಸ ಪುರ, ಮಾಲೂರು, ಕೆಜಿಎಫ್ ಮತ್ತು ಬಂಗಾರ ಪೇಟೆಗಳಲ್ಲಿ ಕನ್ನಡ ಆಡಳಿತ ಭಾಷೆಯಾಗಿದ್ದು, ಈ ಭಾಗದ ಜನ ತೆಲುಗು ಮಾತನಾಡುತ್ತಾರೆ.
ಕಳೆದ ಚುನಾವಣೆಯಲ್ಲಿ ನಟ ಚಿರಂಜೀವಿ ಕೋಲಾರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com